Publish Date: Wed, 21 Mar 2018 (12:13 IST)
Updated Date: Wed, 21 Mar 2018 (12:16 IST)
ಮುಂಬೈ : ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರಿಗೆ ಬುಧವಾರ(ಇಂದು) ಹುಟ್ಟುಹಬ್ಬದ ಸಂಭ್ರಮ. ಆದರೆ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಇಂದು 40ನೇ ವಸಂತಕ್ಕೆ ಕಾಲಿಡುತ್ತಿದ್ದ ನಟಿ ರಾಣಿ ಮುಖರ್ಜಿ ಅವರು ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳಬೇಕೆಂದುಕೊಂಡಿದ್ದರಂತೆ. ಆದರೆ ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿ ಅವರು ಅಕಾಲಿಕ ಮರಣ ಹೊಂದಿದ್ದರಿಂದ ಇಡೀ ಬಾಲಿವುಡ್ ಚಿತ್ರರಂಗವೇ ದುಃಖದಲ್ಲಿ ಮುಳುಗಿದೆ. ಆದ ಕಾರಣ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಮಾರ್ಚ್ 21, 1978ರಂದು ಮುಂಬೈನಲ್ಲಿ ಜನಿಸಿದ ರಾಣಿ ಮುಖರ್ಜಿ ಅವರು 1997ರಲ್ಲಿ ‘ರಾಜಾ ಆಯೇಗಿ ಭಾರತ್’ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದರು. ನಂತರ ಸ್ಟಾರ್ ನಟರ ಜೊತೆ ಅಭಿನಯಿಸಿದ ಇವರು ನಟಿಯಾಗಿ ಮಾತ್ರವಲ್ಲ ನಿರ್ಮಾಪಕಿಯಾಗಿಯೂ ಸಹ ಹೆಸರು ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ