ಕಂಗನಾ ಎಮರ್ಜೆನ್ಸಿ ಕಂಡು ದಂಗಾದ ಗಡ್ಕರಿ: ರಿಲೀಸ್‌ಗೆ ಮುನ್ನವೇ ಚಿತ್ರ ವೀಕ್ಷಿಸಿ ಸಚಿವರು ಹೇಳಿದ್ದೇನು

Sampriya
ಭಾನುವಾರ, 12 ಜನವರಿ 2025 (11:53 IST)
Photo Courtesy X
ನಾಗ್ಪುರ: ಇದೇ 17ರಂದು ಬಿಡುಗಡೆಯಾಗಲಿರುವ ಎಮರ್ಜೆನ್ಸಿ ಚಿತ್ರವನ್ನು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶನಿವಾರ ನಾಗ್ಪುರದ ವಿಶೇಷ ಪ್ರದರ್ಶನದಲ್ಲಿ ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಷ್ಟ್ರದ ಇತಿಹಾಸದ ಕರಾಳ ಅಧ್ಯಾಯವನ್ನು ಅಂತಹ ವಿಶ್ವಾಸಾರ್ಹತೆ ಮತ್ತು ಶ್ರೇಷ್ಠತೆಯೊಂದಿಗೆ ಪ್ರಸ್ತುತಪಡಿಸಿದ್ದಕ್ಕಾಗಿ ಎಮರ್ಜೆನ್ಸಿ ಚಿತ್ರತಂಡವನ್ನು ಪ್ರಶಂಸಿಸುತ್ತೇನೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಗಡ್ಕರಿ ತಿಳಿಸಿದ್ದಾರೆ.

1975ರ ತುರ್ತು ಪರಿಸ್ಥಿತಿ ಕಥಾ ಹಂದರವನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರ ನಿರ್ವಹಿಸಿರುವ ನಟಿ ಕಂಗನಾ ರನೌತ್ ಮತ್ತು ಜಯಪ್ರಕಾಶ್ ನಾರಾಯಣ್ ಅವರ ಪಾತ್ರ ನಿರ್ವಹಿಸಿರುವ ಹಿರಿಯ ನಟ ಅನುಪಮ್ ಕೇರ್ ಜೊತೆಗಿದ್ದರು.

ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರದ ಪ್ರದರ್ಶನ ಕುರಿತಂತೆ ಕಂಗನಾ ಚಿತ್ರಗಳನ್ನು ಹಂಚಿಕೊಂಡಿದ್ದು, ಒಂದು ಚಿತ್ರದಲ್ಲಿ ಕಂಗನಾ, ಗಡ್ಕರಿ ಮತ್ತು ಅನುಪಮ್ ಖೇರ್ ಮಾತುಕತೆ ನಡೆಸುತ್ತಿರುವುದು ಕಂಡುಬಂದಿದೆ.

ಚಿತ್ರದಲ್ಲಿ ಅನುಪಮ್ ಖೇರ್ ಅವರ ಅಭಿನಯವನ್ನು ಕೊಂಡಾಡಿರುವ ಕಂಗನಾ, ಅನುಪಮ್ ಖೇರ್ ಚಿತ್ರದ ಹೀರೊ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಅವರಿಲ್ಲದೆ ಸಿನಿಮಾ ಮಾಡಲು ಸಾಧ್ಯವೇ ಆಗುತ್ತಿರಲಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments