ಬೆಂಗಳೂರು: ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಗೆಳತಿ ಜತೆಗಿನ ಬೆಚ್ಚಗಿನ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಜಿ ಪತ್ನಿ ನತಾಶಾಗೆ ವಿಚ್ಛೇಧನ ನೀಡಿದ ಬಳಿಕ ಹಾರ್ದಿಕ್ ಪಾಂಡ್ಯ, ಮಾಡೆಲ್ ಮಹಿಕಾ ಶರ್ಲಾ ಜತೆ ಕಾಣಿಸಿಕೊಳ್ಳುತ್ತಿದ್ದರು. ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹರಿದಾಡಿತ್ತು.
ಇದೀಗ ಗೆಳತಿ ಜತೆಗಿನ ಲಾಂಗ್ ಡ್ರೈವ್, ಬೀಚ್‌ನಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಹಾರ್ದಿಕ್ ಪಾಂಡ್ಯ ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಗೆಳತಿ ಹಾಗೂ ಮಗನೊಂದಿಗೆ ಕಳೆದ ಕ್ಷಣಗಳನ್ನು ಶೇರ್ ಮಾಡಿದ್ದಾರೆ.
ವಿಡಿಯೋದಲ್ಲಿ ಹಾರ್ದಿಕ್ ಕಾರನ್ನು ತೊಳೆಯುತ್ತಿರುವಾಗ ಮಹಿಕಾ ನೀರು ಹಾಕುತ್ತಿದ್ದರು. ಈ ವೇಳೆ ಗೆಳತಿಯಿಂದ ಹಾರ್ದಿಕ್ ಬೆಚ್ಚಗೆಯ ಮುತ್ತನ್ನು ಪಡೆಯುತ್ತಾರೆ.
ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಿಂದ ಹಾರ್ದಿಕ್ ಪಾಂಡ್ಯ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಫೋಟೋಗಳು ಮತ್ತು ವೀಡಿಯೊಗಳು ಈಗಾಗಲೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗುತ್ತಿವೆ.
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಾಗಿ ಗಮನಸೆಳೆಯುತ್ತಿರುತ್ತಾರೆ.