ಎಲ್ಲರ ಆಶೀರ್ವಾದದಿಂದ ಆರೋಗ್ಯವಾಗಿದ್ದೇನೆ: ಗುಂಡೇಟು ತಗಲಿದ ನಟ ಗೋವಿಂದ ಪ್ರತಿಕ್ರಿಯೆ

Sampriya
ಮಂಗಳವಾರ, 1 ಅಕ್ಟೋಬರ್ 2024 (14:15 IST)
Photo Courtesy X
ಮುಂಬೈ: ನಿಮ್ಮ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ದೇವರ ಆಶೀರ್ವಾದದಿಂದ ಆರೋಗ್ಯವಾಗಿದ್ದೇನೆ. ಬೆಳಿಗ್ಗೆ ಗುಂಡು ಬಿದ್ದಿತ್ತು. ಅದನ್ನು ತೆಗೆಯಲಾಗಿದೆ. ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ಹೇಳುತ್ತೇನೆ. ನಿಮ್ಮ ಪ್ರಾರ್ಥನೆಗಾಗಿ ಧನ್ಯವಾದಗಳು ಎಂದು ನಟ ಗೋವಿಂದ ಹೇಳಿದ್ದಾರೆ.

ಇಂದು ಬೆಳಿಗ್ಗೆ ನಟ ಗೋವಿಂದ ಅವರ ಕಾಲಿಗೆ ಗುಂಡು ತಗುಲಿದೆ. ಪರವಾನಿಗೆ ಹೊಂದಿರುವ ಗನ್​ನಿಂದ ಮಿಸ್ ಫೈಯರ್ ಆಗಿದೆ. ಅವರನ್ನು ಮುಂಬೈನ ಅಂಧೇರಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆ ಬಗ್ಗೆ ಗೋವಿಂದ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಇದ್ದ ಆಂತಕ ದೂರ ಮಾಡಿದ್ದಾರೆ.‌

ಗೋವಿಂದ ಅವರು ಇಂದು ಕೋಲ್ಕತ್ತ ತೆರಳುವವರಿದ್ದರು. ಮುಂಜಾನೆ 5 ಗಂಟೆ ಸುಮಾರಿಗೆ ಅವರು ರೆಡಿ ಆಗುವಾಗ ಕೈಯಲ್ಲಿದ್ದ ಗನ್ ಕೈ ಜಾರಿದೆ. ಆಗ ಆಕಸ್ಮಿಕವಾಗಿ ಬುಲೆಟ್ ಫೈಯರ್ ಆಗಿದೆ. ಇದರಿಂದ ಅವರ ಕಾಲಿಗೆ ಬುಲೆಟ್ ತಾಗಿದೆ. ಬುಲೆಟ್ ಶಬ್ದ ವರದಿ ಆದ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments