ಮುಂಬೈ: ಬಾಲಿವುಡ್ ತಾರೆ ಶಾರುಖ್ ಖಾನ್ ಮತ್ತು ಮಗಳು ಸುಹಾನಾ ಖಾನ್ ಒಂದೇ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ.
ಸುಹಾನಾ ಈಗಾಗಲೇ ಆರ್ಚೀಸ್ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಇದು ಇನ್ನೂ ಬಿಡುಗಡೆಯೇ ಆಗಿಲ್ಲ. ಆಗಲೇ ಆಕೆಗೆ ಅವಕಾಶಗಳು ಸುರಿಮಳೆಯಾಗುತ್ತಿದೆ.
ಇದೀಗ ತಂದೆ ಜೊತೆಗೇ ತೆರೆಹಂಚಿಕೊಳ್ಳುವ ಅವಕಾಶ ಬಂದಿದೆ. ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾವೊಂದರಲ್ಲಿ ಶಾರುಖ್ ಮತ್ತು ಸುಹಾನಾ ತಂದೆ-ಮಗಳಾಗಿಯೇ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಕಿಂಗ್ ಎನ್ನುವ ಟೈಟಲ್ ಫಿಕ್ಸ್ ಆಗಿದೆ ಎಂಬ ಮಾತು ಕೇಳಿಬರುತ್ತಿದೆ. ಇನ್ನೂ ಅಧಿಕೃತವಾಗಿ ಪ್ರಕಟಣೆಯಾಗಿಲ್ಲ.
ಮೂಲಗಳ ಪ್ರಕಾರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ. ಸುಜೋಯ್ ಘೋಷ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಪ್ಪ-ಮಗಳ ಜೋಡಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.