Webdunia - Bharat's app for daily news and videos

Install App

ಶಾರುಖ್ ಖಾನ್ ಜೊತೆ ಮಗಳು ಸುಹಾನಾ ಸಿನಿಮಾ: ಟೈಟಲ್ ಏನು?

Webdunia
ಬುಧವಾರ, 22 ನವೆಂಬರ್ 2023 (09:45 IST)
Photo Courtesy: Twitter
ಮುಂಬೈ: ಬಾಲಿವುಡ್ ತಾರೆ ಶಾರುಖ್ ಖಾನ್ ಮತ್ತು ಮಗಳು ಸುಹಾನಾ ಖಾನ್ ಒಂದೇ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ.

ಸುಹಾನಾ ಈಗಾಗಲೇ ಆರ್ಚೀಸ್ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾ. ಇದು ಇನ್ನೂ ಬಿಡುಗಡೆಯೇ ಆಗಿಲ್ಲ. ಆಗಲೇ ಆಕೆಗೆ ಅವಕಾಶಗಳು ಸುರಿಮಳೆಯಾಗುತ್ತಿದೆ.

ಇದೀಗ ತಂದೆ ಜೊತೆಗೇ ತೆರೆಹಂಚಿಕೊಳ್ಳುವ ಅವಕಾಶ ಬಂದಿದೆ. ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾವೊಂದರಲ್ಲಿ ಶಾರುಖ್ ಮತ್ತು ಸುಹಾನಾ ತಂದೆ-ಮಗಳಾಗಿಯೇ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ‘ಕಿಂಗ್’ ಎನ್ನುವ ಟೈಟಲ್ ಫಿಕ್ಸ್ ಆಗಿದೆ ಎಂಬ ಮಾತು ಕೇಳಿಬರುತ್ತಿದೆ. ಇನ್ನೂ ಅಧಿಕೃತವಾಗಿ ಪ್ರಕಟಣೆಯಾಗಿಲ್ಲ.

ಮೂಲಗಳ ಪ್ರಕಾರ ಜನವರಿಯಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ. ಸುಜೋಯ್ ಘೋಷ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಪ್ಪ-ಮಗಳ ಜೋಡಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments