Publish Date: Wed, 20 Oct 2021 (16:59 IST)
Updated Date: Wed, 20 Oct 2021 (17:00 IST)
ಮುಂಬೈ: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಎರಡೆರಡು ಬಾರಿ ಸಮನ್ಸ್ ಪಡೆದ ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ.
ಎರಡು ಬಾರಿ ಸಮನ್ಸ್ ಪಡೆದಿದ್ದ ಜಾಕ್ವೆಲಿನ್ ಚಿತ್ರೀಕರಣ ನೆಪ ಹೇಳಿ ವಿಚಾರಣೆಯಿಂದ ನುಣುಚಿಕೊಂಡಿದ್ದರು. ಆದರೆ ಮೊನ್ನೆಯಷ್ಟೇ ಜಾರಿ ನಿರ್ದೇಶನಾಲಯ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.
ಹೀಗಾಗಿ ಈಗ ಜಾಕ್ವೆಲಿನ್ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ನಡುವೆ ಹಣದ ವ್ಯವಹಾರ ನಡೆದಿದೆ ಎಂಬುದನ್ನು ಪತ್ತೆ ಮಾಡಿರುವ ಅಧಿಕಾರಿಗಳು ಈ ಸಂಬಂಧ ಆಕೆಯನ್ನು ವಿಚಾರಣೆ ನಡೆಸಿದ್ದಾರೆ.