ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಂಚಕ ಸುಕೇಶ್ ಜೊತೆ ಸಂಬಂಧವಿಟ್ಟುಕೊಂಡ ಕಾರಣಕ್ಕೆ ಇಡಿ ವಿಚಾರಣೆ ಎದುರಿಸುತ್ತಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೊಂದು ಆಘಾತ ಎದುರಾಗಿದೆ.
ಜಾಕ್ವೆಲಿನ್ ತಾಯಿ ಕಿಮ್ ಫರ್ನಾಂಡಿಸ್ ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಬಹ್ರೈನ್ ನಲ್ಲಿರುವ ಜಾಕ್ವೆಲಿನ್ ತಾಯಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ವಿವಾದಗಳಿಂದಾಗಿಯೇ ಸುದ್ದಿಯಲ್ಲಿರುವ ಜಾಕ್ವೆಲಿನ್ ಫರ್ನಾಂಡಿಸ್ ಗೆ ಈ ಮೂಲಕ ಮತ್ತೊಂದು ಸಂಕಷ್ಟ ಎದುರಾಗಿದೆ.