Webdunia - Bharat's app for daily news and videos

Install App

ಸೆಪ್ಟಂಬರ್ 2 ರಂದು ಜಾಗ್ವಾರ್ ಸಿನಿಮಾದ ಆಡಿಯೋ ರಿಲೀಸ್

Webdunia
ಮಂಗಳವಾರ, 23 ಆಗಸ್ಟ್ 2016 (09:26 IST)
ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಾಕಷ್ಟು ಹೈಪ್ ಕ್ರಿಯೇಟ್ ಮಾಡುತ್ತಿರುವ ಸಿನಿಮಾ ಜಾಗ್ವಾರ್. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಖ್ ಕುಮಾರ್ ಅಭಿನಯಿಸುತ್ತಿರುವ ಈ ಸಿನಿಮಾ ಮುಹೂರ್ತ ನಡೆದ ದಿನದಿಂದಲೇ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಅದರಲ್ಲೂ ಶೂಟಿಂಗ್ ವಿಚಾರಕ್ಕೆ ಸಿನಿಮಾ ಸಾಕಷ್ಟು ಸುದ್ದಿಯಾಗುತ್ತಲೇ ಇದೆ. ಹೀಗಿರುವಾಗಲೇ ಸಿನಿಮಾಜ ಆಡಿಯೋ ರಿಲೀಸ್ ಗೆ ಸಿದ್ಧತೆ ನಡೆಯುತ್ತಿದೆಯಂತೆ.

 
ನಿಖಿಲ್ ಕುಮಾರಸ್ವಾಮಿ ಅಭಿನಯಿಸುತ್ತಿರುವ ಚೊಚ್ಚಲ ಸಿನಿಮಾ ಜಾಗ್ವಾರ್. ಈಗಾಗಲೇ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬಲ್ಗೇರಿಯಾದಲ್ಲಿ ಶೂಟಿಂಗ್ ಮುಗಿಸಿಕೊಂಡು ಬಂದಿರುವ ಸಿನಿಮಾ ತಂಡ ಇದೀಗ ಮೈಸೂರಿನಲ್ಲಿ ಶೂಟಿಂಗ್ ನಡೆಸುತ್ತಿದೆ. ಇದೀಗ ಶೂಟಿಂಗ್ ಅಂತಿಮ ಹಂತಕ್ಕೆ ತಲುಪುತ್ತಿದ್ದು ಸಿನಿಮಾ ತಂಡ ಸಿನಿಮಾದ ಆಡಿಯೋ ರಿಲೀಸ್ ಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮುಂದಿನ ತಿಂಗಳು ಅಂದ್ರೆ ಸಪ್ಟಂಬರ್ 2 ರಂದು ಜಾಗ್ವಾರ್ ಸಿನಿಮಾದ ಆಡಿಯೋ ರಿಲೀಸ್ ಆಗಲಿದೆಯಂತೆ. ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಮೈದಾನದ್ಲಲ್ಲಿ ಸಿನಿಮಾದ ಆಡಿಯೋ ರಿಲೀಸ್ ಆಗಲಿದೆ. ಈಗಾಗಲೇ ನಿಖಿಲ್ ತಂದೆ ಕುಮಾರಸ್ವಾಮಿ ಅವರು ಸಿನಿಮಾದ ಆಡಿಯೋ ರಿಲೀಸ್ ಗಾಗಿ ಸ್ಥಳ ಪರಿಶೀಲನೆ ಕೂಡ ನಡೆಸಿದ್ದಾರೆ.

 ಜಾಗ್ವಾರ್ ಸಿನಿಮಾ ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ.ಮಹಾದೇವ್ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು. ಎಸ್ .ಎಸ್ . ತಮನ್ ಅವರು ಈ ಸಿನಿಮಾದ ಸಂಗೀತ ನಿರ್ದೇಶನ ಜವಬ್ದಾರಿ ಹೊತ್ತುಕೊಂಡಿದ್ದಾರೆ.ಕುಮಾರಸ್ವಾಮಿ ಸಿನಿಮಾದ ನಿರ್ಮಾಣದ ಜವಬ್ದಾರಿ ಹೊತ್ತುಕೊಂಡಿದ್ದಾರೆ.ಅಕ್ಟೋಬರ್ ನಲ್ಲಿ ಜಾಗ್ವಾರ್ ಸಿನಿಮಾ ರಿಲೀಸ್ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments