Webdunia - Bharat's app for daily news and videos

Install App

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಸ್ಥಾನಕ್ಕೆ ಜಾಹ್ನವಿ ಕಪೂರ್

Krishnaveni K
ಬುಧವಾರ, 7 ಫೆಬ್ರವರಿ 2024 (13:27 IST)
ಮುಂಬೈ: ರಣಬೀರ್ ಕಪೂರ್ ನಾಯಕರಾಗಿ ಬಾಲಿವುಡ್ ನಲ್ಲಿ ನಿರ್ಮಾಣವಾಗಲಿರುವ ರಾಮಾಯಣ ಸಿನಿಮಾಗೆ ಜಾಹ್ನವಿ ಕಪೂರ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಈ ಮೊದಲು ರಣಬೀರ್ ಕಪೂರ್ ಗೆ ನಾಯಕಿಯಾಗಿ ಸೀತೆ ಪಾತ್ರವನ್ನು ಸೌತ್ ಸುಂದರಿ ಸಾಯಿ ಪಲ್ಲವಿ ನಿರ್ವಹಿಸಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಈಗ ಸಾಯಿ ಪಲ್ಲವಿ ಸ್ಥಾನಕ್ಕೆ ಬಾಲಿವುಡ್ ತಾರೆ, ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಬರಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಇದು ಇನ್ನೂ ಅಧಿಕೃತವಾಗಿಲ್ಲ.

ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ರಾಮಾಯಣ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಆದರೆ ನಾಯಕಿ ಪಾತ್ರಕ್ಕೆ ಸಾಯಿ ಪಲ್ಲವಿ ಜಾಗಕ್ಕೆ ಜಾಹ್ನವಿ ಬರುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.  ರಾಮನ ಪಾತ್ರ ಮಾತ್ರ ಅಂತಿಮವಾಗಿದೆ. ಆದರೆ ಉಳಿದ ಪಾತ್ರವರ್ಗದ ಆಯ್ಕೆ ಇನ್ನಷ್ಟೇ ನಡೆಯುತ್ತಿದೆ.

ಜಾಹ್ನವಿ ಕಪೂರ್ ಈಗಾಗಲೇ ನಿತೀಶ್ ತಿವಾರಿ ಜೊತೆ ಒಂದು ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನೇ ಆಯ್ಕೆ ಮಾಡುವ ಸಾಧ‍್ಯತೆಯಿದೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಚಿತ್ರತಂಡದಿಂದ ಇನ್ನೂ ಅಧಿಕೃತ ಸುದ್ದಿ ಬಂದಿಲ್ಲ.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ರಾವಣನ ಪಾತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ಆದರೆ ಅದೂ ಇನ್ನೂ ಅಧಿಕೃತವಾಗಿಲ್ಲ. ಸದ್ಯಕ್ಕೆ ಯಶ್ ಟಾಕ್ಸಿಕ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಬಾಲಿವುಡ್ ಸಿನಿಮಾದಲ್ಲಿ ಮಾಡುತ್ತಾರಾ ಎನ್ನುವುದು ಇನ್ನೂ ಅಂತಿಮವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಮತ್ತೆ ಯಾವ ಜೈಲಿಗೆ ಹೋಗ್ತಾರೆ ಇಲ್ಲಿದೆ ಮಾಹಿತಿ

Actor Darshan: ಕಾನೂನಿಗಿಂತ ಯಾರೂ ದೊಡ್ಡವರಲ್ಲ: ದರ್ಶನ್ ಬಗ್ಗೆ ಕೋರ್ಟ್ ಹೇಳಿದ್ದೇನು

Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

ಸ್ಟಾರ್ ಗಳಿಲ್ಲ, ಅಬ್ಬರವಿಲ್ಲ ಹಾಗಿದ್ರೂ ಕಾಟೇರ ದಾಖಲೆ ಮುರಿದು ಸು ಫ್ರಮ್ ಸೋ

ಸತ್ಯಕ್ಕೆ ಜಯ ಇದ್ದೇ ಇದೆ ಎಂದ ಪವಿತ್ರಾ ಗೌಡ: ಹಾಗಿದ್ರೆ ರೇಣುಕಾಸ್ವಾಮಿ ಸತ್ತಿದ್ದು ಹೇಗೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments