ಕೃಷ್ಣ ಪ್ರಣಯ ಸಖಿ ಸಿನಿಮಾದ ಯಶಸ್ವಿನ ಬಳಿಕ ನಟ ಗಣೇಶ್ ಅವರು ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ. ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್‌ಗೆ ನಾಯಕಿಯಾಗಿ ಅಮೃತಾ ಅಯ್ಯರ್ ಅವರು ಜೋಡಿಯಾಗಿದ್ದಾರೆ.
ಇಂದು ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.
ಅರಸು ಅಂತಾರೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಗಣೇಶ್‌ಗೆ ನಾಯಕಿಯಾಗಿ ಜೈ ಹನುಮಾನ್ ಖ್ಯಾತಿಯ ಅಮೃತಾ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ.
ಈ ಸಿನಿಮಾದ ಮೂಲಕ ಅಮೃತಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಸಿನಿಮಾದ ಫಸ್ಟ್ ಶೆಡ್ಯೂಲ್ ಮುಗಿಸಿ ನಂತರ ಟೈಟಲ್ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ.