Webdunia - Bharat's app for daily news and videos

Install App

ಜಿಹಾದಿ ಶಾರುಖ್​ನ ಜೀವಂತ ಸುಡುತ್ತೇನೆ

Webdunia
ಬುಧವಾರ, 21 ಡಿಸೆಂಬರ್ 2022 (14:59 IST)
ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡು ಸೃಷ್ಟಿ ಮಾಡಿರುವ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್​..’ (ನಾಚಿಕೆ ಇಲ್ಲದ ಬಣ್ಣ) ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ ಸಿನಿಮಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಯೋಧ್ಯೆಯ ಸ್ವಾಮೀಜಿ ಒಬ್ಬರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್ ಅವರನ್ನು ಜೀವಂತವಾಗಿ ಸುಡುತ್ತೇನೆ ಎಂಬುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಕೇಸರಿ ಬಣ್ಣ ಹಿಂದೂಗಳ ಪಾಲಿಗೆ ವಿಶೇಷ. ಆದರೆ, ‘ಬೇಷರಂ ರಂಗ್​..’ ಹಾಡಿನಲ್ಲಿ ಈ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಅನೇಕರು ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಕೆಲವರು ಸಿನಿಮಾ ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈಗ ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಈ ಹಾಡಿನ ವಿವಾದದ ಕುರಿತು ಮಾತನಾಡಿದ್ದಾರೆ. ಅವರು ಶಾರುಖ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ. ‘ನಮ್ಮ ಸನಾತನ ಧರ್ಮದ ಜನರು ಈ ವಿಚಾರದ ಬಗ್ಗೆ ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ಇಂದು ನಾವು ಶಾರುಖ್ ಖಾನ್ ಅವರ ಪೋಸ್ಟರ್ ಅನ್ನು ಸುಟ್ಟು ಹಾಕಿದ್ದೇವೆ. ಜಿಹಾದಿ ಶಾರುಖ್ ಖಾನ್ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ ನಾನು ಅವರನ್ನು ಜೀವಂತವಾಗಿ ಸುಡುತ್ತೇನೆ’ ಎಂದು ಪರಮಹಂಸ ಆಚಾರ್ಯ ಎಚ್ಚರಿಸಿದ್ದಾರೆ ಎಂಬುದಾಗಿ ಎಐಎನ್​ಎಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ‘ಪಠಾಣ್ ಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆದರೆ ನಾನು ಆ ಸಿನಿಮಾ ಮಂದಿರಕ್ಕೆ ಬೆಂಕಿ ಇಡುತ್ತೇನೆ’ ಎಂದು ಕೂಡ ಪರಮಹಂಸ ಆಚಾರ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ದರ್ಶನ್ ಪರ ಅಖಾಡಕ್ಕಿಳಿದ ವಿಜಯಲಕ್ಷ್ಮಿ, ಅಭಿಮಾನಿಗಳಿಗೆ ಕಳುಹಿಸಿದ್ರು ಸ್ಪಷ್ಟ ಸಂದೇಶ

ಬಿಗ್‌ಬಾಸ್‌ ವಿನ್ನರ್‌, ಯುಟ್ಯೂಬರ್ ಮನೆ ಮೇಲೆ ಬೆಳ್ಳಂಬೆಳಿಗ್ಗೆ ದುಷ್ಕರ್ಮಿಗಳಿಂದ ಗುಂಡಿನ ಮಳೆ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಮುಂದಿನ ಸುದ್ದಿ
Show comments