Select Your Language

Notifications

webdunia
webdunia
webdunia
webdunia

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Sanay Kapur

Krishnaveni K

ಮುಂಬೈ , ಶುಕ್ರವಾರ, 13 ಜೂನ್ 2025 (09:47 IST)
Photo Credit: X
ಮುಂಬೈ: ಅಹಮ್ಮದಾಬಾದ್ ನಲ್ಲಿ ನಡೆದ ವಿಮಾನ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಬೆನ್ನಲ್ಲೇ ಬಾಲಿವುಡ್ ನಟಿ ಕರೀಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲವೇ ಗಂಟೆಗಳ ಮೊದಲು ಅವರು ಅಹಮ್ಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ವಿಮಾನ ದುರಂತದ ಬಗ್ಗೆ ಟ್ವೀಟ್ ಮಾಡಿ ಆಘಾತ ವ್ಯಕ್ತಪಡಿಸಿದ್ದರು. ಇದೊಂದು ಶಾಕಿಂಗ್ ವಿಚಾರ ಎಂದು ಸಂತಾಪ ವ್ಯಕ್ತಪಡಿಸಿದ್ದರು.  ವಿಪರ್ಯಾಸವೆಂದರೆ ಇದಾಗಿ ಕೆಲವೇ ಹೊತ್ತಿನಲ್ಲಿ ಅವರೇ ಇಹಲೋಕ ತ್ಯಜಿಸಿದ್ದಾರೆ.

ಸಂಜಯ್ ಕಪೂರ್ ಉದ್ಯಮಿಯಾಗಿದ್ದು, ಲಂಡನ್ ನಲ್ಲಿದ್ದರು ಎನ್ನಲಾಗಿದೆ. ಇಲ್ಲಿ ಪೋಲೋ ಆಟವಾಡುತ್ತಿದ್ದಾಗ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ಸಂಜಯ್ ಕಪೂರ್ ಸೋನಾ ಕಾಮ್ ಸ್ಟಾರ್ ಕಂಪನಿ ಅಧ್ಯಕ್ಷರಾಗಿದ್ದಾರೆ. 2003 ರಲ್ಲಿ ಅವರು ಕರೀಷ್ಮಾ ಕಪೂರ್ ಜೊತೆ ವಿವಾಹವಾಗಿದ್ದರು. 2016 ರಲ್ಲಿ ದಂಪತಿ ವಿಚ್ಛೇದನ ಪಡೆದಿದ್ದರು. ಇದೀಗ ತಮ್ಮ 53 ನೆಯ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ