ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿರುವ ಟಾಲಿವುಡ್‌ನ ಯುವ ಸೆನ್ಸೇಷನ್ ಶ್ರೀಲೀಲಾ ಈಚೆಗೆ ತಮ್ಮ ಪ್ರೀತಿ ಸಂಬಂಧ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ.
ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಜತೆ ಶ್ರೀಲೀಲಾ ಅವರು ಡೇಟಿಂಗ್‌ನಲ್ಲಿದ್ದಾರೆಂಬ ಗುಸು ಗುಸು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಶ್ರೀಲೀಲಾ ಅವರು ಕಾರ್ತಿಕ್ ಆರ್ಯನ್ ಜೋಡಿಯಾಗಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಈ ಸಿನಿಮಾದ ಶೂಟಿಂಗ್ ಬಳಿಕ ಇವರಿಬ್ಬರ ಆಫ್ ಸ್ಕ್ರೀನ್ ಕೆಮಿಸ್ಟ್ರಿ ನೋಡಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ. ಬರ್ತಡೇ ಪಾರ್ಟಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡ ಬಳಿಕ ಇದೀಗ ಈ ಜೋಡಿ ಡಿನ್ನರ್‌ಗೆ ಒಟ್ಟಾಗಿ ಹೆಜ್ಜೆ ಹಾಕಿರುವುದು ಕ್ಯಾಮಾರದಲ್ಲಿ ಸೆರೆಯಾಗಿದೆ.
ಶ್ರೀಲೀಲಾ ಹೂವಿನ ಉಡುಪಿನಲ್ಲಿ ಸೊಗಸಾಗಿ ಕಾಣಿಸಿಕೊಂಡರೆ, ಕಾರ್ತಿಕ್ ನೀಲಿ ಶರ್ಟ್ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕ್ಯಾಶುಯಲ್ ಲುಕ್‌ಗೆ ಆಯ್ಕೆ ಮಾಡಿಕೊಂಡರು. ಇಬ್ಬರೂ ಪ್ರತ್ಯೇಕವಾಗಿ ರೆಸ್ಟೋರೆಂಟ್‌ನಿಂದ ನಿರ್ಗಮಿಸಿದರು ಆದರೆ ಮಾಧ್ಯಮದ ಗಮನವನ್ನು ತಪ್ಪಿಸಲು ಸಾಧ್ಯವಾಗಲಿಲ್ಲ, ಅವರ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.