Publish Date: Mon, 18 Nov 2019 (16:36 IST)
Updated Date: Mon, 18 Nov 2019 (16:37 IST)
ಮುಂಬೈ: ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಸಾವಿನ ವದಂತಿಗಳಿಗೆ ಸಂಬಂಧಿಕರು ತೆರೆ ಎಳೆದಿದ್ದಾರೆ.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಲತಾ ಮಂಗೇಶ್ಕರ್ ಕಳೆದ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು. ಇದೀಗ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಅಂತರ್ಜಾಲದಲ್ಲಿ ಹರಿದಾಡುತ್ತಿತ್ತು.
ಈ ಬಗ್ಗೆ ಅವರ ಸೋದರ ಸೊಸೆ ಸ್ಪಷ್ಟನೆ ನೀಡಿದ್ದು ಇದೆಲ್ಲಾ ಸುಳ್ಳು ಸುದ್ದಿ. ಲತಾ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.