Publish Date: Tue, 12 Nov 2019 (11:15 IST)
Updated Date: Tue, 12 Nov 2019 (11:16 IST)
ಮುಂಬೈ: ತೀವ್ರ ಅನಾರೋಗ್ಯ ನಿಮಿತ್ತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಉಸಿರಾಟದ ಸಮಸ್ಯೆ ಮತ್ತು ನ್ಯುಮೋನಿಯಾದಿಂದ ಬಳಲುತ್ತಿರುವ 90 ವರ್ಷ ವಯಸ್ಸಿನ ಹಿರಿಯ ಗಾಯಕಿ ನಿನ್ನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.