ಮುಂಬೈ: ಕೊರೋನಾ ಸೋಂಕಿಗೊಳಗಾದ ಪರಿಣಾಮ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ವೈದ್ಯರು ಲೇಟೆಸ್ಟ್ ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ 92 ವರ್ಷದ ಲತಾ ಮಂಗೇಶ್ಕರ್ ಆರೋಗ್ಯ ಗಂಭೀರವಾಗಿಯೇ ಮುಂದುವರಿದಿದೆ ಎನ್ನಲಾಗಿದೆ.
ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ಅವರ ಆರೋಗ್ಯ ಮರಳಿಸಲು ಸಾಧ್ಯವಾದ ಎಲ್ಲಾ ಪ್ರಯತ್ನವನ್ನೂ ಮಾಡುತ್ತಿದ್ದೇವೆ. ಆಕೆಯ ಚೇತರಿಕೆಗೆ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.