ಮುಂಬೈ: ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ವಿಐಪಿಗಳ ಮೇಲೆ ದಾಳಿ ಮಾಡಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಈಗ ತಮ್ಮನ್ನು ಯಾರೋ ಹಿಂಬಾಲಿಸುತ್ತಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಡ್ರಗ್ ಕೇಸ್ ನಲ್ಲಿ ಆರ್ಯನ್ ಖಾನ್ ಸೇರಿದಂತೆ ಇತರರನ್ನು ಬಂಧಿಸಿದ್ದ ಸಮೀರ್ ವಾಂಖೆಡೆ ಈ ಸಂಬಂಧ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಮುಫ್ತಿಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರು ತಮ್ಮನ್ನು ಹಿಂಬಾಲಿಸುತ್ತಿದ್ದು, ತನ್ನ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂದು ಸಮೀರ್ ಆರೋಪಿಸಿದ್ದಾರೆ.
ಆರ್ಯನ್ ಮತ್ತು ಸಹಚರರನ್ನು ಬಂಧಿಸಿದಾಗ ಶಿವಸೇನೆ, ಕಾಂಗ್ರೆಸ್ ಸೇರಿದಂತೆ ಕೆಲವು ರಾಜಕೀಯ ನಾಯಕರೇ ಎನ್ ಸಿಬಿ ಅಧಿಕಾರಿಗಳ ದಾಳಿ ನಕಲಿ ಎಂದು ಆರೋಪಿಸಿದ್ದರು. ಈಗ ಸಮೀರ್ ವಾಂಖೆಡೆ ಮೇಲೆ ಹದ್ದಿನಗಣ್ಣಿಟ್ಟಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.