ಫೋಟೋಗೆ ಫೋಸ್ ನೀಡಿದ ರಣಬೀರ್ ಮತ್ತು ಆಲಿಯಾ..

ನಾಗಶ್ರೀ ಭಟ್
ಶುಕ್ರವಾರ, 23 ಫೆಬ್ರವರಿ 2018 (19:31 IST)
ಪ್ರಸ್ತುತವಾಗಿ ತಮ್ಮ ಮೊದಲ ಹಂತದ ಚಿತ್ರೀಕರಣಕ್ಕಾಗಿ 'ಬ್ರಹ್ಮಾಸ್ತ್ರ' ತಂಡ ಬಲ್ಗೇರಿಯಾದಲ್ಲಿದೆ. ಅಯಾನ್ ಮುಖರ್ಜಿ ನಿರ್ದೇಶನದ 'ಬ್ರಹ್ಮಾಸ್ತ್ರ' ಚಿತ್ರದ ಪ್ರಮುಖ ಪಾತ್ರಗಳಲ್ಲಿರುವ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಸೇರಿದಂತೆ ಪಾತ್ರವರ್ಗ ಮತ್ತು ಸಿಬ್ಬಂದಿಗಳು ಮೊದಲ ಹಂತದ ಶೂಟಿಂಗ್‌ ಅನ್ನು ತುಂಬಾ ಆನಂದಿಸಿದಂತೆ ತೋರುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಆಲಿಯಾ ಮತ್ತು ರಣಬೀರ್ ತಮ್ಮ ತರಬೇತುದಾರ ಇಡೊ ಪೋರ್ಟಲ್ ಅವರ ಜೊತೆಗೆ ಗೂಫಿ ಮುಖವನ್ನು ಮಾಡಿದ ಫೋಟೋವೊಂದು ವೈರಲ್ ಆಗಿತ್ತು.
ಇದೀಗ ಇಡೊ ಪೋರ್ಟಲ್ ಚಿತ್ರದ ನಿರ್ದೇಶಕ ಅಯಾನ್ ಮುಖರ್ಜಿ ಅವನ್ನು ತಮ್ಮೊಂದಿಗೆ ಸೇರಿಕೊಂಡಿರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇಡೊ ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ, ನಿರ್ದೇಶಕ ಅಯಾನ್ ಮುಖರ್ಜಿ ಮತ್ತು ಚಿತ್ರದ ಪ್ರಮುಖ ಪಾತ್ರದಲ್ಲಿರುವ ಆಲಿಯಾ ಹಾಗೂ ರಣಬೀರ್ ಕುರಿತು ತುಂಬಾ ಉದ್ದವಾದ ಸಂದೇಶದೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.
 
'ಬ್ರಹ್ಮಾಸ್ತ್ರ' ಒಂದು ಸಾಹಸಮಯ ವೈಜ್ಞಾನಿಕ ಚಿತ್ರವಾಗಿದ್ದು, ರಣಬೀರ್ ಕಪೂರ್ ಸೂಪರ್‌ಹೀರೋ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಅವರಿಗೆ ಆಲಿಯಾ ಸಾಥ್ ನೀಡಲಿದ್ದಾರೆ. 100 ಕೋಟಿ ರೂಪಾಯಿಗಳ ಅದ್ಧೂರಿ ಬಜೆಟ್‌ನಲ್ಲಿ ಈ ಚಿತ್ರವನ್ನು ತಯಾರಿಸಲಾಗುತ್ತಿದೆ. ಈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಮತ್ತು ಮೌನಿ ರಾಯ್ ಮುಖ್ಯ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ ಎಂದು ತಿಳಿದುಬಂದಿದೆ. ಕರಣ್ ಜೋಹರ್ ಈ ಚಿತ್ರದ ನಿರ್ಮಾಪಕರಾಗಿದ್ದು ಅವರ ಧರ್ಮಾ ಪ್ರೊಡಕ್ಷನ್‌ನಲ್ಲಿ 'ಬ್ರಹ್ಮಾಸ್ತ್ರ' ಮೂಡಿಬರಲಿದೆ. ಅಗಸ್ಟ್ 15, 2019 ರಂದು 'ಬ್ರಹ್ಮಾಸ್ತ್ರ' ತೆರೆಗೆ ಅಪ್ಪಳಿಸಲಿದ್ದು, ಸ್ವಾತಂತ್ರ್ಯೋತ್ಸವದ ವಾರದ ಕೊನೆಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments