ಜೈಲು ಶಿಕ್ಷೆಗೆ ಗುರಿಯಾದ ಹಾಸ್ಯನಟ ರಾಜ್ ಪಾಲ್ ಯಾದವ್

Webdunia
ಗುರುವಾರ, 26 ಏಪ್ರಿಲ್ 2018 (06:28 IST)
ಮುಂಬೈ : ವಂಚನೆ ಪ್ರಕರಣದಡಿಯಲ್ಲಿ ಬಾಲಿವುಡ್ ನ ಹಾಸ್ಯನಟ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಇದೀಗ ಅವರು ಆರು ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆಂಬ ಮಾಹಿತಿ ತಿಳಿದುಬಂದಿದೆ.


2013ರಲ್ಲಿ `ಅತಾ ಪತಾ ಲಾಪತಾ' ಚಿತ್ರಕ್ಕಾಗಿ ರಾಜ್ ಪಾಲ್ ಯಾದವ್ ಮತ್ತು ಅವರ ಪತ್ನಿ ಉದ್ಯಮಿ ಎಂ.ಜಿ. ಅಗರ್ವಾಲ್ ಅವರಿಂದ ಐದು ಕೋಟಿ ರೂಪಾಯಿ ಪಡೆದುಕೊಂಡಿದ್ದರು. ಆದರೆ ಅದನ್ನು ಮರುಪಾವತಿ ಮಾಡದೇ ವಂಚನೆ ಮಾಡಿದ್ದರಿಂದ ಉದ್ಯಮಿ ಎಂ.ಜಿ. ಅಗರ್ವಾಲ್ ಅವರು ನಟ ಹಾಗೂ ಆತನ ಪತ್ನಿಯ ವಿರುದ್ಧ ದೂರು ದಾಖಲಿಸಿದ್ದರು. ಆದ್ದರಿಂದ 2013ರಲ್ಲಿಈ ಕೇಸ್ ನ ವಿಚಾರಣೆಗಾಗಿ ರಾಜ್ ಪಾಲ್ ಅವರನ್ನು ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಆದರೆ ಇತ್ತಿಚೆಗೆ ಕೋರ್ಟ್ ರಾಜ್ ಪಾಲ್ ಯಾದವ್ ಹಾಗೂ ಅವರ ಪತ್ನಿ ಈ ಪ್ರಕರಣದಲ್ಲಿ ಅಪರಾಧಿಗಳು ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣ ಮಾತ್ರ ಎ.23ರಂದು ಪ್ರಕಟಿಸುವುದಾಗಿ ತಿಳಿಸಿತ್ತು.


ಇದೀಗ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು ಇದರ ಪ್ರಕಾರ 1.6 ಕೋಟಿ ರೂ. ದಂಡವನ್ನು ಪಾವತಿಸಬೇಕೆಂದು ಹಾಗು ಆರು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕೆಂದು  ಆದೇಶ ನೀಡಿದೆ. ರಾಜ್ಪಾಲ್ ಪರ ವಕೀಲರು ಜಾಮೀನು ಕೋರಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವ ಸಾದ್ಯತೆ ಇದೆ ಎಂದು ರಾಜ್ಪಾಲ್ ಪರ ವಕೀಲರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments