Publish Date: Sat, 13 Aug 2022 (08:20 IST)
Updated Date: Sat, 13 Aug 2022 (08:33 IST)
ನವದೆಹಲಿ: ಮೊನ್ನೆಯಷ್ಟೇ ತೀವ್ರ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಜು ಶ್ರೀವಾಸ್ತವ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತಕ್ಕೊಳಗಾಗಿದ್ದ ರಾಜು ಶ್ರೀವಾಸ್ತವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರ ಮೆದುಳು ಕಾರ್ಯನಿರ್ವಹಿಸುತ್ತಿಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
ಸದ್ಯಕ್ಕೆ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದೆ. ಹಾಗಿದ್ದರೂ ಅವರೀಗ ಚಿಕಿತ್ಸೆಗೆ ಸಂಪೂರ್ಣವಾಗಿ ಸ್ಪಂದಿಸುತ್ತಿಲ್ಲ. ಸದ್ಯಕ್ಕೆ ವೈದ್ಯರು ಕಾದು ನೋಡಲು ತೀರ್ಮಾನಿಸಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.