ಗರ್ಭಿಣಿ ಪತ್ನಿ ದೀಪಿಕಾ ಪಡುಕೋಣೆಯನ್ನು ಎಚ್ಚರಿಕೆಯಿಂದ ಅಂಬಾನಿ ಮದುವೆಗೆ ಕರೆತಂದ ರಣವೀರ್

Krishnaveni K
ಶುಕ್ರವಾರ, 1 ಮಾರ್ಚ್ 2024 (13:38 IST)
ಮುಂಬೈ: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮದುವೆಗೆ ಗರ್ಭಿಣಿ ದೀಪಿಕಾ ಪಡುಕೋಣೆ ಮತ್ತು ಪತಿ ರಣವೀರ್ ಸಿಂಗ್ ಆಗಮಿಸಿದ್ದಾರೆ.

ನಿನ್ನೆಯಷ್ಟೇ ದೀಪಿಕಾ ಪಡುಕೋಣೆ ಎರಡು ತಿಂಗಳ ಗರ್ಭಿಣಿ ಎನ್ನುವ ವಿಚಾರವನ್ನು ರಣವೀರ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಚಾರ ಹೊರಬರುತ್ತಿದ್ದಂತೇ ಸೆಲೆಬ್ರಿಟಿಗಳು, ಅಭಿಮಾನಿಗಳು ದೀಪಿಕಾ-ರಣವೀರ್ ಗೆ ಶುಭಾಶಯಗಳ ಸುರಿಮಳೆಯನ್ನೇ ಹರಿಸಿದ್ದಾರೆ.

ಇದೀಗ ಸಿಹಿ ಸುದ್ದಿ ನೀಡಿದ ಮರುದಿನವೇ ದೀಪಿಕಾ ಪತಿ ರಣವೀರ್ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ಜಾಮ್ ನಗರದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಇದಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ರಣವೀರ್ ಕೂಡಾ ಪತ್ನಿಯನ್ನು ಕರೆದುಕೊಂಡು ಬಂದಿದ್ದಾರೆ.

ಗರ್ಭಿಣಿ ಪತ್ನಿಯನ್ನು ಎಚ್ಚರಿಕೆಯಿಂದ ಕೈ ಹಿಡಿದೇ ರಣವೀರ್ ಕರೆದುಕೊಂಡು ಬಂದಿದ್ದು ಎಲ್ಲರ ಗಮನ ಸೆಳೆದಿದೆ. ಮಾಧ್ಯಮಗಳು ಮುತ್ತಿಗೆ ಹಾಕಲೆತ್ನಿಸಿದಾಗಲೂ ದೀಪಿಕಾ ಕೈ ಬಿಡದೇ ರಣವೀರ್ ಜವಾಬ್ಧಾರಿ ನಿಭಾಯಿಸಿದ್ದು ಎಲ್ಲರ ಗಮನ ಸೆಳೆದಿದೆ. ದೀಪಿಕಾ ಮತ್ತು ರಣವೀರ್ ಸಿಂಗ್ ಮುಂದಿನ ಸೆಪ್ಟೆಂಬರ್ ನಲ್ಲಿ ಮೊದಲ ಮಗುವನ್ನು ಬರಮಾಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments