ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

Krishnaveni K
ಮಂಗಳವಾರ, 2 ಡಿಸೆಂಬರ್ 2025 (12:25 IST)
Photo Credit: X
ಮುಂಬೈ: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ ಚಾಪ್ಟರ್ 1 ಸಿನಿಮಾವನ್ನು ಹೊಗಳುವ ಭರದಲ್ಲಿ ದೈವಕ್ಕೆ ಅವಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಕೊನೆಗೂ ಕ್ಷಮೆ ಯಾಚಿಸಿದ್ದಾರೆ.

ಗೋವಾದಲ್ಲಿ ಫಿಲಂಸ್ ಫೆಸ್ಟಿವಲ್ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಎದುರು ಕಾಂತಾರ ಚಾಪ್ಟರ್ 1 ಸಿನಿಮಾ ಬಗ್ಗೆ ಮಾತನಾಡಿದ್ದ ರಣವೀರ್ ಸಿಂಗ್ ಚಾಮುಂಡಿ ದೈವವನ್ನು ಹೆಣ್ಣು ದೆವ್ವ ಎಂದಿದ್ದರು. ಅದೂ ಸಾಲದೆಂಬಂತೆ ಕಾಂತಾರ ಕ್ಲೈಮ್ಯಾಕ್ಸ್ ನಲ್ಲಿ ರಿಷಬ್ ದೈವದ ಸನ್ನಿವೇಶವನ್ನು ಅನುಕರಿಸಲು ಹೋಗಿ ಅಪಹಾಸ್ಯ ಮಾಡಿದ್ದರು.

ಇದರ ವಿರುದ್ಧ ತುಳುನಾಡಿನ ದೈವಾರಾಧಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಲವರು ಸೋಷಿಯಲ್ ಮೀಡಿಯಾದಲ್ಲಿ ಇದು ಹಿಂದೂ ನಂಬಿಕೆಗೆ ಮಾಡಿದ ಅವಹೇಳನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ರಣವೀರ್ ಸಿನಿಮಾಗಳನ್ನು ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಇನ್ನು, ಹಿಂದೂ ಜಾಗರಣ ವೇದಿಕೆ ರಣವೀರ್ ವಿರುದ್ಧ ದೂರು ಕೂಡಾ ನೀಡಿತ್ತು.

ಇದರ ಬೆನ್ನಲ್ಲೇ ಈಗ ಸೋಷಿಯಲ್ ಮೀಡಿಯಾದಲ್ಲಿ ರಣವೀರ್ ಸಿಂಗ್ ಕ್ಷಮೆ ಯಾಚಿಸಿದ್ದಾರೆ. ‘ಕಾಂತಾರ ಕ್ಲೈಮ್ಯಾಕ್ಸ್ ನಲ್ಲಿ ರಿಷಬ್ ಎಷ್ಟು ಅದ್ಭುತವಾಗಿ ನಟಿಸಿದ್ದರು ಎಂದು ಹೇಳುವುದು ನನ್ನ ಉದ್ದೇಶವಾಗಿತ್ತಷ್ಟೇ. ದೇಶದ ಎಲ್ಲಾ ಭಾಗದ ಸಂಸ್ಕೃತಿ, ಸಂಪ್ರದಾಯಗಳನ್ನು ನಾನು ಗೌರವಿಸುತ್ತೇನೆ. ಹಾಗಿದ್ದರೂ ನನ್ನ ವರ್ತನೆಯಿಂದ ಯಾರಿಗಾದರೂ ಬೇಸರವಾಗಿದ್ದಲ್ಲಿ ಕ್ಷಮೆ ಯಾಚಿಸುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments