Webdunia - Bharat's app for daily news and videos

Install App

Rape Case: ಕುಂಭಮೇಳದ ವೈರಲ್ ಬೆಡಗಿ ಮೊನಲಿಸಾ ಸಿನಿಮಾ ನಿರ್ದೇಶಕ ಅರೆಸ್ಟ್‌

Sampriya
ಸೋಮವಾರ, 31 ಮಾರ್ಚ್ 2025 (15:15 IST)
Photo Courtesy X
ನವದೆಹಲಿ: ಮಹಾಕುಂಭಮೇಳ ಸಮಯದಲ್ಲಿ ವೈರಲ್ ಆಗಿದ್ದ ಮೊನಾಲಿಸಾಗೆ ಸಿನಿಮಾ ನಿರ್ದೇಶನ ಮಾಡಲು ಮುಂದಾಗಿದ್ದ ಸನೋಜ್ ಮಿಶ್ರಾ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದೀಗ ಈ ಪ್ರಕರಣ ಸಂಬಂಧ ಮಿಶ್ರಾ ಅವರನ್ನು ವಶಕ್ಕೆ ಪಡೆಯಲಾಗಿದೆ.

ದೆಹಲಿ ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಈ ಬಂಧನ ನಡೆದಿದೆ.

ಗಾಜಿಯಾಬಾದ್‌ನಲ್ಲಿ ಬಂಧನ ನಡೆದಿದ್ದು, ಮುಂಬೈನಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿರುವ ಮಿಶ್ರಾ ಅವರನ್ನು ನಬಿ ಕರೀಮ್ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದರು.


28 ವರ್ಷದ ಮಹಿಳೆಯೊಬ್ಬರು ದೂರು ನೀಡಿ, ಮಿಶ್ರಾ ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಪದೇ ಪದೇ ಅರ್ತಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಸಿನಿಮಾದಲ್ಲಿ ಅವಕಾಶ ನೀಡಿರುವುದಾಗಿ ಹೇಳಿ ಮಿಶ್ರಾ ಜತೆ ಪರಿಚಯವಾಗಿದ್ದು, ಈ ವೇಳೆ ಅವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ.  ಇನ್ನೂ ಮೂರು ಬಾರಿ ಮಿಶ್ರಾ ಅವರು  ಗರ್ಭಪಾತ ಪ್ರಕ್ರಿಯೆಗಳಿಗೆ ಒಳಗಾಗುವಂತೆ ಒತ್ತಾಯಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ದೂರುದಾರರು ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಮಿಶ್ರಾ ಅವರು ತನ್ನನ್ನು ಮದುವೆಯಾಗುವುದಾಗಿ ನೀಡಿದ್ದ ಭರವಸೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ದೆಹಲಿ ಪೊಲೀಸರ ಹೇಳಿಕೆಯ ಪ್ರಕಾರ, ಮಾರ್ಚ್ 6, 2024 ರಂದು ಅತ್ಯಾಚಾರ, ಹಲ್ಲೆ, ಗರ್ಭಪಾತಕ್ಕೆ ಕಾರಣವಾಗುವುದು ಮತ್ತು ಬೆದರಿಕೆ ಹಾಕುವುದು ಸೇರಿದಂತೆ ಹಲವಾರು ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ಹೇಳಿಕೆ ನೀಡುವ ಸಂದರ್ಭದಲ್ಲಿ ದೂರುದಾರರು ತಮ್ಮ ಆರೋಪಗಳನ್ನು ಬೆಂಬಲಿಸಿದ್ದಾರೆ.

ಮುಜಫರ್‌ನಗರದಿಂದ ಗರ್ಭಪಾತಕ್ಕೆ ಸಂಬಂಧಿಸಿದ ವೈದ್ಯಕೀಯ ಪುರಾವೆಗಳನ್ನು ಪೊಲೀಸರು ಸಂಗ್ರಹಿಸುವಲ್ಲಿ ಯಶಸ್ವಿಯಾದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments