ಮುಂಬೈ: ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್ ಕಡೆಯಿಂದ ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದೆ. ನಟ ಇಂದೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.
ಸೈಫ್ ಅಲಿ ಖಾನ್ ಮನೆಗೆ ಮೊನ್ನೆ ತಡರಾತ್ರಿ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದ. ಪರಿಣಾಮ ಸೈಫ್ ಗೆ ಗಂಭೀರ ಗಾಯವಾಗಿತ್ತು. ಮುಂಬೈನ ಲೀಲಾವತಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಇಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಬೆನ್ನಿಗೆ ತೀವ್ರ ಗಾಯವಾಗಿದ್ದರಿಂದ ಸೋಂಕು ಉಂಟಾಗುವ ಸಾಧ್ಯತೆಯಿತ್ತು. ಈ ಕಾರಣಕ್ಕೆ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇಂದು ಅವರನ್ನು ಡಿಸ್ಚಾರ್ಜ್ ಮಾಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು, ಸೈಫ್ ಅಲಿ ಖಾನ್ ಗೆ ಚಾಕು ಇರಿದ ಪ್ರಕರಣದಲ್ಲಿ ಈಗಾಗಲೇ ಬಾಂಗ್ಲಾದೇಶೀ ಪ್ರಜೆ ಶರೀಫುಲ್ ಇಸ್ಲಾಂ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ. ಈಗಾಗಲೇ ಸೈಫ್ ಪತ್ನಿ ಕರೀನಾ, ಮನೆಕೆಲಸದವರ ಹೇಳಿಕೆಗಳನ್ನು ದಾಖಲಿಸಲಾಗಿದೆ.