Select Your Language

Notifications

webdunia
webdunia
webdunia
webdunia

ಜೈಲು ವಾಸ ಅನುಭವಿಸುತ್ತಿರುವ ನಟ ಸಲ್ಮಾನ್ ಖಾನ್ !

ಜೈಲು ವಾಸ ಅನುಭವಿಸುತ್ತಿರುವ ನಟ ಸಲ್ಮಾನ್ ಖಾನ್  !
ಜೋಧಪುರ , ಶುಕ್ರವಾರ, 6 ಏಪ್ರಿಲ್ 2018 (08:16 IST)
ಜೋಧಪುರ : ಕೃಷ್ಣ ಮೃಗ ಭೇಟೆಯಾಡಿದ ಪ್ರಕರಣದಡಿ ಅಪರಾಧಿ ಎಂದು ಸಾಬೀತಾದ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಇದೀಗ ಸೆರೆಮನೆವಾಸ ಅನುಭವಿಸುತ್ತಿದ್ದಾರೆ.


ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧಪುರ್ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿದ್ದು, ಅದರ ಪ್ರಕಾರ ಸಲ್ಮಾನ್ ಖಾನ್ ಅವರು ದೋಷಿ ಎಂದು ಅವರಿಗೆ 5 ವರ್ಷ ಜೈಲು ವಾಸ ಹಾಗೂ 10000 ರೂ. ದಂಡ ವಿಧಿಸಿ, ಈ ಪ್ರಕರಣಕ್ಕೆ ಸಂಬಂಧಿಸಿದ ಉಳಿದ ಆರೋಪಿಗಳನ್ನು  ಖುಲಾಸೆಗೊಳಿಸಿತ್ತು.


ಆದಕಾರಣ ಸಲ್ಮಾನ್ ಖಾನ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಆರೋಗ್ಯ ತಪಾಸಣೆ ನಡೆಸಿ ಜೈಲಿಗೆ ಕರೆದೊಯ್ಯಲಾಗಿದೆ. ಇದೀಗ ಅವರನ್ನು ಜೈಲಿನಲ್ಲಿಯ ವಾರ್ಡ್‌ ನಂ. 2 ರಲ್ಲಿ ಇರಿಸಲಾಗಿದೆ. 106 ರನ್ನು ಕೈದಿ ನಂಬರ್‌ ಆಗಿ ನೀಡಲಾಗಿದೆ.


ಹಾಗೇ ಸಲ್ಮಾನ್ ಖಾನ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿರುವ ಕಾರಣ ಅದರ ವಿಚಾರಣೆ ಶುಕ್ರವಾರ(ಇಂದು) ಬೆಳಿಗ್ಗೆ 10.30ಕ್ಕೆ ನಿಗದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೀಜರ್’ ಚಿತ್ರದ ಡೈಲಾಗ್ ಬಗ್ಗೆ ಜನರು ವಿರೋಧ ವ್ಯಕ್ತಪಡಿಸಿದ್ದು ಯಾಕೆ…?