Select Your Language

Notifications

webdunia
webdunia
webdunia
webdunia

ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪವನ್ ಒಡೆಯರ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪವನ್ ಒಡೆಯರ್
ಬೆಂಗಳೂರು , ಮಂಗಳವಾರ, 21 ಆಗಸ್ಟ್ 2018 (10:43 IST)
ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಅವರು ನಟಿ ಅಪೇಕ್ಷಾ ಪುರೋಹಿತ ಜೊತೆ ಸೋಮವಾರದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.


ಬಾಗಲಕೋಟೆಯ ಪಟ್ಟಣದ ವಿದ್ಯಾಗಿರಿಯ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಗುರುಹಿರಿಯರು ಹಾಗೂ ಬಂಧುಗಳ ಸಮ್ಮುಖದಲ್ಲಿ ಇವರ ವಿವಾಹ ಸಮಾರಂಭವು ಅದ್ದೂರಿಯಾಗಿ ನಡೆದಿದೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ನಟ ನಟಿಯರು ಈ ವಿವಾಹ ಸಮಾರಂಭಕ್ಕೆ ಆಗಮಿಸಿದ್ದು, ವಧುವರರಿಗೆ ಶುಭ ಹಾರೈಸಿದ್ದಾರೆ. ಅಗಸ್ಟ್ 26 ರಂದು ಬೆಂಗಳೂರಿನ ಸ್ಯಾಂಗ್ರೀಲಾ ಹೊಟೇಲ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ಕೂಡ ನಡೆಯಲಿದೆ.


ನಟ ಕೋಮಲ್ ಅಭಿನಯದ ಗೋವಿಂದಾಯ ನಮಃ ಚಿತ್ರದ ಮೂಲಕ ನಿರ್ದೇಶಕ ವೃತ್ತಿಗೆ ಕಾಲಿಟ್ಟ ಪವನ್ ಒಡೆಯರ್ ಗೂಗ್ಲಿ, ರಣವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದೀಗ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಪೇಕ್ಷಾ ಅವರು ಟಿ.ಎನ್. ಸೀತಾರಾಂ ನಿರ್ದೇಶನದ ಕಾಫಿ ತೋಟ ಚಿತ್ರದಲ್ಲಿ ನಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಂಗಲೆ ಖರೀದಿಸಿ ಸಂಕಷ್ಟಕ್ಕೆ ಸಿಲುಕಿದ ಬಾಲಿವುಡ್‌ ನಟಿ ಕಂಗನಾ ರನಾವತ್