Webdunia - Bharat's app for daily news and videos

Install App

ತೆರೆ ಮೇಲೆ ಒಂದಾಗಲಿದ್ದಾರೆ ಮಾಜಿ ಪ್ರೇಮಿಗಳು

Webdunia
ಮಂಗಳವಾರ, 9 ಆಗಸ್ಟ್ 2016 (08:55 IST)
ಬಾಲಿವುಡ್ ಬೆಸ್ಟ್ ಜೋಡಿಗಳಲ್ಲಿ ಒಂದು ಮಾದುರಿ ದೀಕ್ಷಿತ್ ಹಾಗೂ ಸಂಜಯ್ ದತ್ ಅವರ ಜೋಡಿ. ಅವರಿಬ್ಬರ ಸಿನಿಮಾ ಅಂದ್ರೆ ಇಂದಿಗೂ ನೋಡೋದಕ್ಕೆ ಕಾಯುವ ಅದೆಷ್ಟೋ ಅಭಿಮಾನಿಗಳಿದ್ದಾರೆ. ಒಂದು ಕಾಲದಲ್ಲಿ ಬಾಲಿವುಡ್ ನಲ್ಲಿ ಜೋಡಿ ಹಕ್ಕಿಗಳಾಗಿ ಹಾರಾಡಿದವರು ಸಂಜಯ್ ದತ್ ಹಾಗೂ ಮಾದುರಿ ದೀಕ್ಷಿತ್. ಇವರಿಬ್ಬರು ವಿವಾಹವಾಗುತ್ತಾರೆ ಅನ್ನೋ ಮಟ್ಟಿಗೆ ಸುದ್ದಿಯಾಗಿತ್ತು. ಬಳಿಕ ಇಬ್ಬರೂ ಬೇರೆ ಬೇರೆ  ವಿವಾಹವಾದ್ರು.


ಸಂಜಯ್ ದತ್ ಹಾಗೂ ಮಾಧುರಿ ದೀಕ್ಷಿತ್ ಅವರನ್ನು ಮತ್ತೆ ತೆರೆ ಮೇಲೆ ಜೊತೆಯಾಗಿ ನೋಡಬೇಕು ಅಂತಾ ಅದೆಷ್ಟೋ ಅಭಿಮಾನಿಗಳು ಬಹು ವರ್ಷಗಳಿಂದ ಕಾಯುತ್ತಲೇ ಇದ್ದಾರೆ.ಆದ್ರೀಗ ಅಂತಹ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ.

ಸಂಜಯ್ ದತ್ ಹಾಗೂ ಮಾಧುರಿ ದೀಕ್ಷಿತ್ ಅವರು ಬರೋಬ್ಬರಿ 20 ವರ್ಷಗಳ ನಂತ್ರ ಜೊತೆಯಾಗಿ ಅಭಿನಯಿಸಲಿದ್ದಾರೆ ಅಂತಾ ಹೇಳಲಾಗುತ್ತಿದೆ.ಅಂದ್ಹಾಗೆ ಸಂಜಯ್ ದತ್ ಅವರು ಕಳೆದ ಎರಡು ವರ್ಷಗಳಿಂದ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ.ಆದ್ರೆ ಇದೀಗ ಜೈಲಿನಿಂದ ಹೊರ ಬಂದ ಬಳಿಕ  ಸಂಜಯ್ ದತ್ ಅವರು ಆ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಅನ್ನೋ ಮಾತುಗಳು ಜೋರಾಗಿ ಕೇಳಿ ಬರುತ್ತಿದೆ. ಹೀಗಿರುವಾಗಲೇ ಮಾದುರಿ ಹಾಗೂ ದತ್ ಮತ್ತೆ ಜೊತೆಯಾಗುತ್ತಿದ್ದಾರೆ ಅಂತಾ ಹೇಳಲಾಗುತ್ತಿದೆ.

ಅಂದ್ಹಾಗೆ ಸಂಜಯ್ ದತ್ ಅವರು ವಿದು ವಿನೋದ್ ಛೋಪ್ರಾ ಅವರ ಮಾರ್ಕೋ ಬಾಹು ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಅನ್ನೋ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಇದೇ ಸಿನಿಮಾದಲ್ಲಿ ಸಂಜಯ್ ದತ್ ಅವರಿಗೆ ನಾಯಕಿಯಾಗಿ ಮಾದುರಿ ಅವರು ಕಾಣಿಸಿಕೊಳ್ಳಲಿದ್ದಾರೆ ಅಂತಾ ಹೇಳಲಾಗುತಿದೆ.ಈಗಾಗಲೇ ವಿದು ವಿನೋದ್ ಛೋಪ್ರಾ ಅವರು ಈ ಬಗ್ಗೆ ಮಾಧುರಿ ದೀಕ್ಷಿತ್ ಅವರ ಬಳಿ ಮಾತುಕತೆ ನಡೆಸಿದ್ದಾರಂತೆ.ಅವರ ನಿರ್ಧಾರದ ಬಳಿರ ಮುಂದಿನ ನಿರ್ಧಾರ ಗೊತ್ತಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments