Publish Date: Tue, 26 Apr 2022 (09:10 IST)
Updated Date: Tue, 26 Apr 2022 (09:36 IST)
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ಸದ್ಯದಲ್ಲೇ ಬಾಲಿವುಡ್ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಪುತ್ರ ಅರ್ಜುನ್ ತೆಂಡುಲ್ಕರ್ ಅಪ್ಪನಂತೇ ಕ್ರಿಕೆಟ್ ಲೋಕದಲ್ಲಿ ಮಿಂಚುತ್ತಿದ್ದರೆ, ಇತ್ತ ಪುತ್ರಿ ಮಾಡೆಲಿಂಗ್ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು.
ಸಾರಾ ಕಳೆದ ವರ್ಷ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಟನೆಯಲ್ಲಿ ಆಸಕ್ತಿ ಹೊಂದಿರುವುದರಿಂದ ಈಗಾಗಲೇ ತರಬೇತಿಯನ್ನೂ ಪಡೆದಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಅವರು ಬಾಲಿವುಡ್ ಸಿನಿಮಾಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.