Select Your Language

Notifications

webdunia
webdunia
webdunia
webdunia

ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ ಸೀತಾವಲ್ಲಭ ಸೀರಿಯಲ್ ನಟಿ ಸುಪ್ರೀತಾ ಸತ್ಯನಾರಾಯಣ್, ಹುಡುಗು ಯಾರು ಗೊತ್ತಾ

Seetha Vallabha Serial, Supreeta Sathyanarayan,  Colors Kannada,

Sampriya

ಬೆಂಗಳೂರು , ಸೋಮವಾರ, 14 ಏಪ್ರಿಲ್ 2025 (16:52 IST)
Photo Credit X
ಸೀತಾವಲ್ಲಭ ಸೀರಿಯಲ್ ಮೂಲಕ ಮನೆಮಾತಾಗಿದ್ದ ನಟಿ ಸುಪ್ರೀತಾ ಸತ್ಯನಾರಾಯಣ್ ಅವರ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ.

ಇವರ ನಿಶ್ಚಿತಾರ್ಥ ಈಚೆಗೆ ಚಂದನ್ ಶೆಟ್ಟಿ ಜತೆಗೆ ನಡೆದಿದೆ. ಈ ವಿಷಯವನ್ನು ನಟಿಯೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹೊಸ ಚಾಪ್ಟರ್ ಇಲ್ಲಿಂದ ಶುರು. ಹಲೋ ಎನ್ನುವ ನಿನ್ನ ಧ್ವನಿಯಿಂದಲೇ ಪ್ರೀತಿ ಶುರುವಾದ ಬಗ್ಗೆ ಹೇಳಲಾ ಅಥವಾ ನಿನ್ನ ನಗು ನೋಡಿದಾಗ ನನ್ನ ಹೊಟ್ಟೆಯೊಳಗಡೆ ಚಿಟ್ಟೆ ಹಾರಾಟ ಮಾಡೋ ಬಗ್ಗೆ ಹೇಳಲಾ? ನಿನ್ನ ನಗು ಅಂದ್ರೆ ನನಗೆ ತುಂಬ ಇಷ್ಟ. ಆ ನಗುಗೋಸ್ಕರ ನಾನು ಏನು ಬೇಕಿದ್ರೂ ಮಾಡುವೆ. ಖುಷಿಗೋಸ್ಕರ ನಾನು ದೇವರ ಬಳಿ ಪ್ರಾರ್ಥಿಸಿದೆ. ಅವನು ನನಗೆ ನಿಮ್ಮನ್ನು ಕೊಟ್ಟ. ನನ್ನ ಜೀವನಕ್ಕೆ ಬಂದಿದ್ದಕ್ಕೆ, ನಿಜವಾದ ಲವ್ ಏನು ಎಂದು ಅರ್ಥ ಮಾಡಿಸಿದ್ದಕ್ಕೆ, ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯೂ ಎಂದು ಬರೆದುಕೊಂಡಿದ್ದಾರೆ.

ನಿನ್ನ ನಗು, ಶಾಂತಿ, ಖುಷಿಗೋಸ್ಕರ ನಾನು ಪ್ರಾಮೀಸ್ ಮಾಡುವೆ. ನಿನ್ನ ಜೀವನದುದ್ದಕ್ಕೂ ಇರುವೆ ಎಂದು ಮಾತುಕೊಡ್ತೀನಿ. ಇಬ್ಬರೂ ಒಟ್ಟಿಗೆ ಜೀವನ ಕಳೆಯೋಣ. ಐ ಲವ್ ಯೂ ಕಂದ. ನನ್ನ ಹೃದಯ ನಿನ್ನದು. ನನ್ನ ಎದೆಯಾಳೋ ಧಣಿ ನೀನೇ, ನಿನ್ನ ಸಹಚಾರಿಣಿ ನಾನೇ ಎಂದು ನಟಿ ಪೋಸ್ಟ್ ಬರೆದುಕೊಂಡಿದ್ದಾರೆ. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ, ಈ ವರ್ಷ ಮಾರ್ಚ್ 12ರಂದು ಎಂಗೇಜ್ ಆಗಿರೋದಾಗಿ ರಿವೀಲ್ ಮಾಡಿದ್ದಾರೆ.

ಇವರ ಬಾವಿ ಪತಿ ಚಂದನ್ ಶೆಟ್ಟಿ ಡಿಜಿಟಲ್ ಕ್ರಿಯೇಟರ್, ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬುಲೆಟ್ ಫ್ರೂಫ್ ಗಾಜಿನ ಹಿಂದೆ ನಿಂತು ಫ್ಯಾನ್ಸ್‌ಗೆ ಕೈ ಬೀಸಿದ ಬೆನ್ನಲ್ಲೇ ನಟ ಸಲ್ಮಾನ್‌ ಖಾನ್‌ಗೆ ಹೊಸ ಟೆನ್ಷನ್‌