Select Your Language

Notifications

webdunia
webdunia
webdunia
webdunia

ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ ಪ್ರಿಯಾಂಕಾ

ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ ಪ್ರಿಯಾಂಕಾ
ಚೆನ್ನೈ , ಗುರುವಾರ, 19 ಜುಲೈ 2018 (07:32 IST)
ಚೆನ್ನೈ : ತಮಿಳಿನ ಕಿರುತೆರೆ ನಟಿ ಪ್ರಿಯಾಂಕಾ ಬುಧವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಇವರು ಹಿರಿಯ ನಟಿ ರಮ್ಯಾ ಕೃಷ್ಣ ಅವರು ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿರುವ ತಮಿಳಿನ 'ವಂಶಂ' ಎಂಬ ಧಾರಾವಾಹಿಯಲ್ಲಿ ಜ್ಯೋತಿಕಾ ಎಂಬ ಪಾತ್ರದಲ್ಲಿ ನಟಿಸುವುದರ ಮೂಲಕ ಜನಪ್ರಿಯತೆ ಗಳಿಸಿದ್ದರು. ಪ್ರಿಯಾಂಕಾ ಅವರಿಗೆ ಮೂರು ವರ್ಷದ ಹಿಂದೆ ಮದುವೆ ಆಗಿತ್ತು. ಮದುವೆಯ ನಂತರವೂ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.


ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಪ್ರಿಯಾಂಕಾ ದಂಪತಿಗೆ ಮಕ್ಕಳಿಲ್ಲ ಎನ್ನುವ ಕೊರಗಿತ್ತು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೋಶಿಯಲ್ ಮಿಡಿಯಾದಲ್ಲಿ ನಟ ಪ್ರಭಾಸ್ ಗೆ ಅವಮಾನ ಮಾಡಿದ್ರಾ ನಟ ಸಿದ್ಧಾರ್ಥ?