ಪ್ರಧಾನಿ ಪರಿಹಾರ ನಿಧಿಗೆ ಬಾಲಿವುಡ್ ನಟ ಶಾರುಖ್ ಖಾನ್ ದೇಣಿಗೆ

ಶುಕ್ರವಾರ, 3 ಏಪ್ರಿಲ್ 2020 (09:58 IST)
ಮುಂಬೈ: ಮೊನ್ನೆಯಷ್ಟೇ ಎಲ್ಲರೂ ಕೊರೋನಾ ತಡೆಗೆ ಪ್ರಧಾನಿ ಪರಿಹಾರ ನಿಧಿಗೆ ದೇಣಿಗೆ ನೀಡಿದರೂ ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್ ನೀಡಿಲ್ಲ ಎಂಬ ಟೀಕೆ ವ್ಯಕ್ತವಾಗಿತ್ತು. ಅದಕ್ಕೆ ಈಗ ಶಾರುಖ್ ದೇಣಿಗೆ ನೀಡುವ ಮೂಲಕ ಉತ್ತರ ನೀಡಿದ್ದಾರೆ.


ಈಗಾಗಲೇ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅಜಯ್ ದೇವಗನ್, ಸಲ್ಮಾನ್ ಖಾನ್ ತಮ್ಮದೇ ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಇದೀಗ ಶಾರುಖ್ ಕೂಡಾ ಸಹಾಯ ನೀಡಲು ಮುಂದಾಗಿದ್ದಾರೆ.

ಪ್ರಧಾನಿ ಪರಿಹಾರ ನಿಧಿಗೆ ದೇಣಿಗೆ ನೀಡಿರುವುದಾಗಿ ಶಾರುಖ್ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ, ಇದು ಕೇವಲ ಆರಂಭವಷ್ಟೇ, ಮುಂದಿನ ದಿನಗಳಲ್ಲಿ ನಮ್ಮ ಕೈಲಾದ ರೀತಿಯಲ್ಲಿ ಎಷ್ಟು ಸಹಾಯ ಮಾಡಲು ಸಾಧ‍್ಯವಾಗುತ್ತದೋ ಅದನ್ನು ಮಾಡುವುದಾಗಿ ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ನಂದಿ ಬೆಟ್ಟದ ಮಂಗಗಳ ಹಸಿವು ನೀಗಿಸಿದ ಕಿರುತೆರೆ ನಟ ಚಂದನ್