ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬಸ್ಥರಿಗೆ ಕೊರೋನಾ ಸೋಂಕು ತಗುಲಿದೆ. ಆದರೆ ಅದೃಷ್ಟವಶಾತ್ ಶಿಲ್ಪಾಗೆ ನೆಗೆಟಿವ್ ವರದಿ ಬಂದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಿಲ್ಪಾ ನನ್ನ ಮಾವ, ಪತಿ, ತಾಯಿ ಸೇರಿದಂತೆ ಹಲವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಅವರೆಲ್ಲರೂ ಈಗ ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದಿದ್ದಾರೆ. ಜೊತೆಗೆ ಮನೆಯ ಇಬ್ಬರು ನೌಕರರಿಗೂ ಸೋಂಕು ದೃಢಪಟ್ಟಿದೆ.
ಆದರೆ ನನ್ನ ವರದಿ ನೆಗೆಟಿವ್ ಬಂದಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ನಾವು ನಿಯಮಗಳನ್ನು ಪಾಲಿಸುತ್ತಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆಯಿರಲಿ ಎಂದು ಶಿಲ್ಪಾ ಬರೆದುಕೊಂಡಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!