ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾಗೆ ಇಡಿ ಸಂಕಷ್ಟ: 97 ಕೋಟಿ ರೂ. ಆಸ್ತಿ ವಶಕ್ಕೆ

Krishnaveni K
ಗುರುವಾರ, 18 ಏಪ್ರಿಲ್ 2024 (14:23 IST)
Photo Courtesy: Twitter
ನವದೆಹಲಿ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾಗೆ ಇಡಿ ಸಂಕಷ್ಟ ಎದುರಾಗಿದೆ. ಸೆಲೆಬ್ರಿಟಿ ದಂಪತಿಗಳಿಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದೆ.

ಪಿಎಂಎಲ್ಎ, 2002 ರ ನಿಬಂಧನೆಗಳ ಅಡಿಯಲ್ಲಿ ರಾಜ್ ಕುಂದ್ರಾಗೆ ಸೇರಿದ 97.79 ಕೋಟಿ ರೂ. ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಇಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಇಡಿ ಇಲಾಖೆ ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.

ಜುಹುವಿನಲ್ಲಿರುವ ವಸತಿ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ ಶಿಲ್ಪಾ ಶೆಟ್ಟಿ ಹೆಸರಿನಲ್ಲಿದ್ದು ಇದನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದರ ಜೊತೆಗೆ ರಾಜ್ ಕುಂದ್ರಾ ಹೆಸರಿನಲ್ಲಿರುವ ಈಕ್ವಿಟಿ ಷೇರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.

ಕೆಲವು ಸಮಯದ ಹಿಂದೆ ರಾಜ್ ಕುಂದ್ರಾ ಬ್ಲೂ ಫಿಲಂ ದಂಧೆ ಆರೋಪದಲ್ಲಿ ಬಂಧಿತರಾಗಿದ್ದರು. ಕೆಲವು ದಿನ ಜೈಲು ವಾಸ ಅನುಭವಿಸಿದ್ದ ರಾಜ್ ಕುಂದ್ರಾ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಇಡಿ ಕೇಸ್ ಬಗ್ಗೆ ಅವರ ಪರ ವಕೀಲರು ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹಣ ವರ್ಗಾವಣೆ ನಿಯಮದಡಿ ನನ್ನ ಕಕ್ಷಿದಾರರಿಗೆ ಯಾವುದೇ ತೊಂದರೆಯಾಗದಂತೆ ಕಾನೂನಿನ ಪ್ರಕಾರ ಅವರನ್ನು ರಕ್ಷಿಸಲು ಏನೆಲ್ಲಾ ಸಾಧ‍್ಯವೋ ಅದೆಲ್ಲವನ್ನೂ ಮಾಡಲಿದ್ದೇವೆ. ಈ ಕುರಿತಂತೆ ನಿಷ್ಪಕ್ಷಪಾತ ತನಿಖೆಯಾಗಲಿದೆ ಎಂದು ನನ್ನ ಕಕ್ಷಿದಾರರು ನಂಬಿರುತ್ತಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments