ಪತ್ನಿಯನ್ನು ಕಳೆದುಕೊಂಡ ವ್ಯಕ್ತಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ ನಟ ಸೋನು ಸೂದ್

Webdunia
ಗುರುವಾರ, 11 ಜೂನ್ 2020 (10:49 IST)
ಮುಂಬೈ: ನಟ ಸೋನು ಸೂದ್ ಲಾಕ್ ಡೌನ್ ಸಮಯದಲ್ಲಿ ಹಲವು ವಲಸೆ ಕಾರ್ಮಿಕರಿಗೆ ಊರಿಗೆ ತೆರಳಲು ಬಸ್, ವಿಮಾನ ವ್ಯವಸ್ಥೆ ಮಾಡಿ ಸುದ್ದಿಯಾಗಿದ್ದರು. ಈ ನಡುವೆ ಸೋನು ಪತ್ನಿಯ ಸಾವಿನ ದುಃಖದಲ್ಲಿರುವ ವ್ಯಕ್ತಿಗೆ ಸಹಾಯ ಮಾಡಲು ಭರವಸೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

 
ಸೋನುಗೆ ಟ್ವೀಟ್ ಮಾಡಿರುವ ಅಭಿಮಾನಿಯೊಬ್ಬರು ನಮ್ಮ ನೆರೆಮನೆಯ ವ್ಯಕ್ತಿ ಸೀತಾರಾಮ್ ಎಂಬವರ ಪತ್ನಿ ಅವರ ಊರು ವಾರಣಾಸಿಯಲ್ಲಿ ತೀರಿಕೊಂಡಿದ್ದಾರೆ. ಆದರೆ ಅವರಿಗೆ ಅಲ್ಲಿಗೆ ಹೋಗಲು ಸಾಧ‍್ಯವಾಗುತ್ತಿಲ್ಲ. ಕೊನೆಗೆ ನಮಗೆ ನೀವೇ ದಿಕ್ಕು ಎಂದು ತೋಚಿ  ಈ ಟ್ವೀಟ್ ಮಾಡುತ್ತಿದ್ದೇವೆ. ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿರುವ ಸೋನು ‘ಪತ್ನಿಯನ್ನು ಕಳೆದುಕೊಂಡ ಆ ವ್ಯಕ್ತಿಗೆ ನನ್ನ ಸಂತಾಪಗಳು. ನಾಳೆಯೇ ಅವರನ್ನು ಕಳುಹಿಸಿಕೊಡಲು ವ್ಯವಸ್ಥೆ ಮಾಡುತ್ತೇನೆ. ಯಾರಾದರೂ ಅವರ ಜತೆಗೆ ಹೋಗುವವರಿದ್ದರೆ ಅವರ ವಿವರಗಳನ್ನೂ ನನಗೆ ಕಳುಹಿಸಿಕೊಡಿ. ವ್ಯವಸ್ಥೆ ಮಾಡಿಕೊಡುತ್ತೇನೆ’ ಎಂದಿದ್ದಾರೆ. ಸೋನು ಈ ರೀತಿ ತ್ವರಿತವಾಗಿ ಪ್ರತಿಕ್ರಿಯೆ ನೀಡಿರುವುದಕ್ಕೆ ನೆಟ್ಟಿಗರು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments