ಬೆಂಗಳೂರು: ಬಾಲಿವುಡ್ ನಟ ಸೋನು ಸೂದ್ ಕೊರೋನಾ ಸಂಕಷ್ಟದಲ್ಲಿ ಸಾಕಷ್ಟು ಜನರಿಗೆ ನೆರವು ನೀಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಆಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ಒದಗಿಸಿ ಮಾನವೀಯತೆ ಮೆರೆದಿದ್ದ ಸೋನು ಸೂದ್ ಈಗ ಮತ್ತೊಂದು ಉತ್ತಮ ಕೆಲಸ ಮಾಡಿದ್ದಾರೆ.
ಬೆಂಗಳೂರಿನ ಶ್ರೇಯಸ್ ಆಸ್ಪತ್ರೆಯಲ್ಲಿ ಸಂಭವಿಸಬೇಕಿದ್ದ ಆಕ್ಸಿಜನ್ ಸೋರಿಕೆ ದುರಂತವನ್ನು ಸೋನು ಸೂದ್ ಟ್ರಸ್ಟ್ ಸದಸ್ಯರು ತಪ್ಪಿಸಿದ್ದಾರೆ. ಪೊಲೀಸರ ಸಹಾಯದೊಂದಿಗೆ ಸೋನು ಸೂದ್ ಟ್ರಸ್ಟ್ ಸದಸ್ಯರು ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಆಸ್ಪತ್ರೆಯ ಆಕ್ಸಿಜನ್ ಪ್ಲ್ಯಾಂಟ್ ನಿಂದ ಆಕ್ಸಿಜನ್ ಸೋರಿಕೆಯಾಗುತ್ತಿರುವುದನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಪೊಲೀಸರು ಮತ್ತು ಸೋನು ಸೂದ್ ಟ್ರಸ್ಟ್ ಗೆ ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸದಸ್ಯರು ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.