Publish Date: Fri, 15 Dec 2017 (21:27 IST)
Updated Date: Fri, 15 Dec 2017 (21:29 IST)
ಹೊಸ ವರ್ಷಾಚರಣೆಗೆ ನಗರದಲ್ಲಿ ನಡೆಯುವ ಬಾಲಿವುಡ್ ನಟಿ ಸನ್ನಿ ಲಿಯೋನ್ ನೈಟ್ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡದಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ನಟಿ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಹಲವರ ವಿರೋಧ ವ್ಯಕ್ತವಾಗಿರುವ ಕಾರಣ ಅನುಮತಿ ನೀಡಿದ್ದರೆ ಅದನ್ನು ರದ್ದು ಮಾಡಲು ಸೂಚನೆ ನೀಡಲಾಗುವುದು.
ನಮ್ಮ ಸಂಪ್ರದಾಯಕ್ಕೆ ವಿರುದ್ಧವಾದ ಕಾರ್ಯಕ್ರಮ ಬೇಡ. ದೊಡ್ಡ ದೊಡ್ಡ ಕಲಾವಿದರಿದ್ದಾರೆ. ಅವರನ್ನು ಕರೆಸಿ ಕಾರ್ಯಕ್ರಮ ಮಾಡಿ ನಮ್ಮ ಅಭ್ಯಂತರವಿಲ್ಲ ಎಂದ ಸಚಿವರು ಅದು ನಮ್ಮ ಸಂಸ್ಕೃತಿಗೆ ಪೂರಕವಾದುದಲ್ಲ. ಹೀಗಾಗಿ ಬೇಡ ಎಂದಿದ್ದೇವೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.