ಚೆನ್ನೈ: ದಿ ಕೇರಳ ಸ್ಟೋರಿ ಸಿನಿಮಾ ಮೂಲಕ ಸಂಚಲನ ಮೂಡಿಸಿದ್ದ ನಟಿ ಅದಾ ಶರ್ಮಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 
									
			
			 
 			
 
 			
			                     
							
							
			        							
								
																	ಆಹಾರದಲ್ಲಿನ ವ್ಯತ್ಯಾಸದಿಂದಾಗಿ ಅವರಿಗೆ ಅನಾರೋಗ್ಯವಾಗಿದೆ. ಅವರಿಗೆ ಅತಿಸಾರ ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
									
										
								
																	ಅದಾ ಶರ್ಮಾ ತಮ್ಮ ಮುಂದಿನ ಕಮಾಂಡೋ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಬೇಕಿತ್ತು. ಈ ಸಿನಿಮಾದಲ್ಲಿ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ. ಆದರೆ ಅನಾರೋಗ್ಯದಿಂದಾಗಿ ಚಿತ್ರೀಕರಣಕ್ಕೆ ಅಡ್ಡಿಯಾಗಿದೆ.