ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಶುಭಾಶಯ ಕೋರಿದ ರೀತಿ ಇದು

Webdunia
ಬುಧವಾರ, 27 ಡಿಸೆಂಬರ್ 2023 (11:37 IST)
ಬೆಂಗಳೂರು: ಇಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಜನ್ಮದಿನ. ಈ ವಿಶೇಷ ದಿನಕ್ಕೆ ಅವರಿಗೆ ಆತ್ಮೀಯವಾಗಿರುವ ನಟ ಕಿಚ್ಚ ಸುದೀಪ್ ವಿಶೇಷವಾಗಿಯೇ ವಿಶ್ ಮಾಡಿದ್ದಾರೆ.

ಸಲ್ಮಾನ್ ಖಾನ್ ಜೊತೆಗೆ ಸುದೀಪ್ ದಬಾಂಗ್ ಸಿನಿಮಾದಲ್ಲಿ ಅಭಿನಯಿಸಿದ್ದರು. ಇದಾದ ಬಳಿಕ ಇಬ್ಬರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಿದೆ. ಸಲ್ಮಾನ್ ರನ್ನು ಸುದೀಪ್ ತನ್ನ ಹಿರಿಯ ಅಣ್ಣನಂತೇ ನೋಡುತ್ತಾರೆ.

ಇದೀಗ ಸಲ್ಮಾನ್ ಹುಟ್ಟುಹಬ್ಬಕ್ಕೆ ಸುದೀಪ್ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ಮೂಲಕ ವಿಶ್ ಮಾಡಿದ್ದಾರೆ. ‘ನನ್ನ ಪ್ರೀತಿಯ ಸರ್ ಮತ್ತು ಅಣ್ಣನ ಸಮಾನ ಸಲ್ಮಾನ್ ಖಾನ್ ಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೊತೆ ಕಳೆದ ಪ್ರತಿಯೊಂದು ಕ್ಷಣವೂ ಅವಿಸ್ಮರಣೀಯ. ನಮ್ಮ ಜೀವನದಲ್ಲಿ ವಿಶೇಷ ವ್ಯಕ್ತಿಯಾಗಿ ಎಲ್ಲರನ್ನೂ ಪ್ರೀತಿಸುವ ವ್ಯಕ್ತಿಯಾಗಿ ಜೊತೆಯಾಗಿರುವುದಕ್ಕೆ ಧನ್ಯವಾದಗಳು. ಹ್ಯಾಪೀ ರಿಟರ್ನ್ಸ್’ ಎಂದು ಸುದೀಪ್ ವಿಶ್ ಮಾಡಿದ್ದಾರೆ.

ಸಲ್ಮಾನ್ ಖಾನ್ ಇಂದು 58 ನೇ ಜನ್ಮದಿನಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಸಿನಿ ತಾರೆಯರು, ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಕಸಿ ಮಾಡಿಸಿದ್ದ ಸ್ತನ ತೆಗೆದ ಶೆರ್ಲಿನ್ ಚೋಪ್ರಾ, ಕಾರಣ ಹೀಗೇ ಬರೆದುಕೊಂಡಿದ್ದಾರೆ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ಮುಂದಿನ ಸುದ್ದಿ
Show comments