Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

Krishnaveni K
ಬುಧವಾರ, 19 ನವೆಂಬರ್ 2025 (15:18 IST)
ಪುಟ್ಟಪರ್ತಿ: ಇಂದು ಸಾಯಿಬಾಬ ಅವರ ಜನ್ಮ ಜಯಂತಿ ನಿಮಿತ್ತ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿದ್ದ ಪ್ರಧಾನಿ ಮೋದಿ ಕಾಲಿಗೆ ನಟಿ ಐಶ್ವರ್ಯಾ ರೈ ನಮಸ್ಕರಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಸಾಯಿಬಾಬ ಜನ್ಮ ಜಯಂತಿ ನಿಮಿತ್ತ ಪುಟ್ಟಪರ್ತಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನಿ ಮೋದಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ಐಶ್ವರ್ಯಾ ರೈ ಸೇರಿದಂತೆ ಘಟಾನುಘಟಿಗಳು ವೇದಿಕೆಯಲ್ಲಿದ್ದರು.

ಈ ವೇಳೆ ನಟಿ ಐಶ್ವರ್ಯಾ ರೈ ಭಕ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸಾಯಿಬಾಬರ ಆದರ್ಶಗಳನ್ನು ಸ್ಮರಿಸಿದ ಐಶ್ವರ್ಯಾ ‘ಒಂದೇ ಜಾತಿ ಇರುವುದು, ಅದು ಮಾನವೀಯತೆ, ಒಂದೇ ಧರ್ಮ ಅದು ಪ್ರೀತಿ, ಒಂದೇ ಭಾಷೆ ಅದು ಹೃದಯದ ಭಾಷೆ, ದೇವರೂ ಒಬ್ಬನೇ’ ಎಂದು ಭಾಷಣ ಮಾಡಿದ್ದಾರೆ.

ತಮ್ಮ ಭಾಷಣ ಮುಗಿಸಿ ಐಶ್ವರ್ಯಾ ವೇದಿಕೆಯಲ್ಲಿದ್ದ ತಮ್ಮ ಆಸನದಲ್ಲಿ ಕೂರುವ ಮೊದಲು ಪಕ್ಕದಲ್ಲೇ ಕುಳಿತಿದ್ದ ಪ್ರಧಾನಿ ಮೋದಿ ಬಳಿ ಹೋಗಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ವಿಡಿಯೋಗೆ ಸಾಕಷ್ಟು ಕಾಮೆಂಟ್ ಗಳು ಬರುತ್ತಿವೆ.

ಬಿಜೆಪಿ ಬೆಂಬಲಿಗರು ಈ ವಿಚಾರವಾಗಿ ಐಶ್ವರ್ಯಾರನ್ನು ಹೊಗಳಿದ್ದಾರೆ. ಹಿರಿಯರಿಗೆ ಗೌರವ ಕೊಡುವುದು ಹೇಗೆ ಎಂದು ಐಶ್ವರ್ಯಾರನ್ನು ನೋಡಿ ಕಲಿಯಬೇಕು ಎಂದಿದ್ದಾರೆ. ಇನ್ನು, ಬಿಜೆಪಿ ಮತ್ತು ಮೋದಿ ವಿರೋಧಿಗಳು ಐಶ್ವರ್ಯಾ ಹೀಗೆ ಮಾಡುವ ಅಗತ್ಯವಿತ್ತಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments