Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ತಮ್ಮ ಗೆಳತಿಯನ್ನ ಹೇಗೆ ಕರೀತಾರೆ ಗೊತ್ತಾ…?

Webdunia
ಶನಿವಾರ, 14 ಅಕ್ಟೋಬರ್ 2017 (18:23 IST)
ಮುಂಬೈ: ಫ್ರೆಂಡ್ ಶಿಷ್, ಲವ್ ನಲ್ಲಿ ನಮ್ಮ ಪ್ರೀತಿ ಪಾತ್ರರಿಗೆ ತಮ್ಮದೇ ರೀತಿಯಲ್ಲಿ ಕ್ಯೂಟ್ ಪೆಟ್ ನೇಮ್ ಇಟ್ಟು ಕರೀತಾರೆ. ಹಾಗೆ ವಿರಾಟ್ ಕೊಹ್ಲಿ ಅನುಷ್ಕಾರನ್ನ ಹೇಗೆ ಕರೀತಾರೆ ಗೊತ್ತಾ…

ದೀಪಾವಳಿ ಹಬ್ಬದ ಪ್ರಯುಕ್ತ ಖಾಸಗಿ ವಾಹಿನಿ ನಡೆಸಿದ ವಿಶೇಷ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ವಿರಾಟ್ ಕೊಹ್ಲಿ, ತಮ್ಮ ಗೆಳತಿ ಅನುಶ್ಕಾ ಶರ್ಮಾ ಅವರ ಅಡ್ಡ ಹೆಸರನ್ನ ರಿವೀಲ್ ಮಾಡಿದ್ದಾರೆ. ಕೊಹ್ಲಿ ಅನುಷ್ಕಾರನ್ನ `ನುಷ್ಕಿ’  ಎಂದು ಕರೆಯುತ್ತಾರಂತೆ. ಸುದ್ದಿ ವಾಹಿನಿಯು ಕಾರ್ಯಕ್ರಮದ ಪ್ರೋಮೋ ಬಿಡುಗಡೆ ಮಾಡಿದ್ದು, ಇದರಲ್ಲಿ ಆಮೀರ್ ಖಾನ್ ಜತೆ ಭಾಗವಹಿಸಿದ್ದ ಕೊಹ್ಲಿ ಮಾತುಕತೆಯ ಸಂದರ್ಭದಲ್ಲಿ `ನುಷ್ಕಿ’ ಬಹಳ ಪ್ರಮಾಣಿಕಳು ಎಂದು ಹೇಳಿದ್ದಾರೆ.

ನಾನು ಪ್ರೀತಿಯಲ್ಲಿ ಒಮ್ಮೆ ಮಾತ್ರ ಬಿದ್ದಿದ್ದೇನೆ ಎಂದು ವಿರಾಟ್ ಹೇಳಿದ್ದಾರೆ. ಈ ಶೋ ನಲ್ಲಿ ಭಾಗವಹಿಸಿದ್ದ ಪತ್ರಕರ್ತ ಸಮೀರ್ ಅಲ್ಲಾ ಟ್ವಿಟರ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದರು. ಅನುಷ್ಕಾರಲ್ಲಿ ಇಷ್ಟವಾದ ಗುಣ ಮತ್ತು ಇಷ್ಟವಿಲ್ಲದ ಗುಣ ಯಾವುದು ಎಂಬ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ನುಷ್ಕಿ ಬಹಳ ಪ್ರಮಾಣಿಕಳು. ಈ ಗುಣ ನನಗೆ ಇಷ್ಟ. ಇಷ್ಟವಿಲ್ಲದ ಗುಣ ಎಂದರೆ ಯಾವಾಗಲೂ 5-7 ನಿಮಿಷ ತಡವಾಗಿ ಆಗಮಿಸುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ.

ಇತ್ತೀಚೆಗೆ ಅನುಷ್ಕಾ ಕ್ಲಾತಿಂಗ್ ಬ್ರ್ಯಾಂಡ್‍ ಆರಂಭಿಸಿದ್ದು ಅದಕ್ಕೆ ‘ನುಶ್ ಎಂದು ಹೆಸರಿಟ್ಟಿದ್ದಾರೆ. 2013ರಿಂದಲೂ ಈ ಜೋಡಿ ರಿಲೇಷನ್ ಶಿಪ್ ನಲ್ಲಿದ್ದಾರೆ ಎಂದು ಸುದ್ದಿಯಾಗುತ್ತಲೇ ಇದೆ. ಆದ್ರೆ ಈ ಜೋಡಿ ಮಾತ್ರ ಈ ಬಗ್ಗೆ ಬಹಿರಂಗವಾಗಿ ಮಾಧ್ಯಮಗಳ ಎದುರು  ಹೇಳಿಕೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments