ಬೆಂಗಳೂರು: ಬಾಲಿವುಡ್‌ನಲ್ಲಿ ಸ್ಟಾರ್ ಜೋಡಿಯೊಂದು 37 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಾಲಿವುಡ್ ಖ್ಯಾತ ನಟ ಗೋವಿಂದ ಮತ್ತು ಅವರ ಪತ್ನಿ ಸುನೀತಾ ಅಹುಜಾ ಅವರ 37 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿದ್ದಾರೆ ಎಂಬ ಸುದ್ದಿಯಿದೆ.
ಬಾಲಿವುಡ್ ನಟ ಗೋವಿಂದ ಮತ್ತು ಅವರ ಪತ್ನಿ ಸುನೀತಾ ಅಹುಜಾ ನಡುವೆ ಎಲ್ಲವೂ ಸರಿಯಿಲ್ಲ. ಆದ್ದರಿಂದ ಕಳೆದ ಕೆಲ ದಿನಗಳಿಂದ ಈ ಜೋಡಿ ಪ್ರತ್ಯೇಕವಾಗಿ ವಾಸಿಸುತ್ತಿದೆ.
ಈ ಹಿಂದೆಯೂ ಸುನೀತಾ ಅಹುಜಾ ಅವರು ಕೆಲವು ತಿಂಗಳ ಹಿಂದೆ ತಮ್ಮ ಪತಿ, ನಟ ಗೋವಿಂದ ಅವರಿಂದ ಬೇರ್ಪಡೆಯಾಗುತ್ತಿರುವ ಬಗ್ಗೆ ಸೂಚನೆ ನೀಡಿದ್ದರು.