ಎಐಎಡಿಎಂಕೆ ಪಕ್ಷ ವಿಜಯ್ ‘ಸರ್ಕಾರ್’ ಚಿತ್ರವನ್ನು ವಿರೋಧಿಸಿದಕ್ಕೆ ನಟನ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 12 ನವೆಂಬರ್ 2018 (07:06 IST)
ಚೆನ್ನೈ : ತಮಿಳಿನ ಖ್ಯಾತ ನಟ ವಿಜಯ್ ಅಭಿನಯದ ‘ಸರ್ಕಾರ್’ ಚಿತ್ರಕ್ಕೆ ಎಐಎಡಿಎಂಕೆ ಪಕ್ಷದವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಇದೀಗ ವಿಜಯ್ ಅಭಿಮಾನಿಗಳು ರಾಜಕೀಯ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ವಿಜಯ್ ನಟಿಸಿದ ಸರ್ಕಾರ್ ಸಿನಿಮಾ ದೀಪಾವಳಿ ಹಬ್ಬದಂದು ಜಗತ್ತಿನಾದ್ಯಂತ ಬಿಡುಗಡೆಗೊಂಡಿದ್ದು ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಸಿನಿಮಾದ ಕೆಲ ದೃಶ್ಯಗಳಲ್ಲಿ ಟಿವಿ, ಲ್ಯಾಪ್​ಟಾಪ್​ ಹಾಗೂ ಮಿಕ್ಸಿಗಳನ್ನು ಬೆಂಕಿಗೆ ಹಾಕುವ ದೃಶ್ಯವಿದ್ದು, ಇದಕ್ಕೆ ಎಐಎಡಿಎಂಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ್​ ಚಿತ್ರತಂಡ ಆ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ಹೇಳಿವುದರ ಮೂಲಕ ಈ ವಿವಾದಕ್ಕೆ ತೆರೆ ಎಳೆದಿದೆ.


ಆದರೆ ರಾಜಕೀಯ ಪಕ್ಷದ ಈ ವರ್ತನೆಗೆ ಆಕ್ರೋಶಗೊಂಡಿರುವ ನಟ ವಿಜಯ್ ಅಭಿಮಾನಿಗಳು ಚಿತ್ರದಲ್ಲಿನ ದೃಶ್ಯದಂತೆ ಟಿವಿ, ಲ್ಯಾಪ್​ಟಾಪ್​ಗಳಿಗೆ ಬೆಂಕಿ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದಲ್ಲದೆ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments