Publish Date: Sun, 24 Jun 2018 (22:55 IST)
Updated Date: Mon, 25 Jun 2018 (11:52 IST)
ರಾಜ್ಯ ಸರಕಾರದ ನೂತನ ಬಜೆಟ್‍ನಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಈ ಹಿಂದಿನ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಹೊಸ ಸರಕಾರ ಬಂದಾಗ ಇನ್ನಷ್ಟು ಹೆಚ್ಚಿನ ಕಾರ್ಯಕ್ರಮಗಳನ್ನು ಜನರಿಗೆ ನೀಡುತ್ತದೆ. ಅದರಲ್ಲಿ ವಿಶೇಷತೆಯೇನಿಲ್ಲ. ಹೀಗಾಗಿ ಈ ಹಿಂದಿನ ಬಜೆಟ್ ಕಾರ್ಯಕ್ರಮಗಳನ್ನು ಮುಂದುವರೆಸುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು.
ನಿಗಮ, ಮಂಡಳಿ ಚರ್ಚೆ: ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಪಟ್ಟಿ ಸಿದ್ಧಗೊಳ್ಳುತ್ತಿದೆ. ಮೈತ್ರಿ ಸರಕಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಅಸಮಧಾನ ಇರುವ ಬಗ್ಗೆ ತಮಗೇನೂ ಗೊತ್ತಿಲ್ಲ. ಅಸಮಧಾನ ಇದ್ದರೆ ನನಗೆ ಹೇಳುತ್ತಾರೆ ಎಂದರು. ರಾಜ್ಯದ ರೈತರ ಸಾಲ ಮನ್ನಾಕ್ಕೆ ಕಾಂಗ್ರೆಸ್ ಯಾವತ್ತು ವಿರೋಧ ಮಾಡಿಲ್ಲ. ಕುಮಾರಸ್ವಾಮಿಯವರು ಪ್ರಧಾನಿ ಬಳಿ 50 ಸಾವಿರ ಕೋಟಿ ಸಹಾಯ ಕೇಳಿದ್ದಾರೆ ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ.