Select Your Language

Notifications

webdunia
webdunia
webdunia
webdunia

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ
ನವದೆಹಲಿ , ಶನಿವಾರ, 28 ಆಗಸ್ಟ್ 2021 (09:47 IST)
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 46,759 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 437370ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 359775 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31374 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31852802 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 17,61,110 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 1,03,35,290 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 62,29,89,134 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೆಲವರಿಗೆ ಹೆಚ್ಚು ಸೊಳ್ಳೆ ಕಚ್ಚಲು ಕಾರಣವೇನು...? ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ