Publish Date: Thu, 16 Jul 2020 (10:26 IST)
Updated Date: Thu, 16 Jul 2020 (10:28 IST)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚುತ್ತಿರುವಾಗ ಆರೋಗ್ಯ ಸಚಿವ ಬಿ ಶ್ರೀರಾಮುಲು ನೀಡಿದ ಹೇಳಿಕೆಯೊಂದು ಟೀಕೆಗೆ ಗುರಿಯಾಗಿದೆ.
ಚಿತ್ರದುರ್ಗದಲ್ಲಿ ಮಾಧ್ಯಮಗಳು ಕರ್ನಾಟಕದಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ಕೊರೋನಾ ಹರಡುವುದನ್ನು ತಡೆಯಲು ದೇವರಿಗೆ ಮಾತ್ರ ಸಾಧ‍್ಯ’ ಎಂದಿದ್ದಾರೆ.
ಅವರ ಈ ಹೇಳಿಕೆ ಟೀಕೆಗೆ ಗುರಿಯಾಗಿದೆ. ಒಬ್ಬ ಆರೋಗ್ಯ ಸಚಿವರಾಗಿ ಅವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ ಎಂಬ ವಾದ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.