Publish Date: Sun, 07 Jun 2020 (09:30 IST)
Updated Date: Sun, 07 Jun 2020 (09:32 IST)
ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಇದೀಗ ಜಾಗತಿಕವಾಗಿ ಅತೀ ಹೆಚ್ಚು ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.
ಇದುವರೆಗೆ ಭಾರತದಲ್ಲಿ ಸೋಂಕಿತರಾದವರ ಸಂಖ್ಯೆ 2.4 ಲಕ್ಷಕ್ಕೇರಿಕೆಯಾಗಿದ್ದು, ಸ್ಪೇನ್ ದೇಶವನ್ನೂ ಹಿಂದಿಕ್ಕಿ ಐದನೇ ಸ್ಥಾನಕ್ಕೇರಿದೆ. ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 6,642 ಕ್ಕೆ ಏರಿಕೆಯಾಗಿದೆ.
ನಾಳೆಯಿಂದ ಮಾಲ್, ಹೋಟೆಲ್ ಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವಿದೆ.