Publish Date: Fri, 23 Jul 2021 (20:25 IST)
Updated Date: Sat, 24 Jul 2021 (09:48 IST)
ರಾಜ್ಯದಲ್ಲಿ 1705 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 30 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕು ಪ್ರಕರಣದಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,91,699ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 36,323ಕ್ಕೆ ಏರಿದೆ.
ಒಂದು ದಿನದಲ್ಲಿ 2243 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,31,226ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,127ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 400 ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಮೂವರು ಸೋಂಕಿನಿಂದ ಅಸುನೀಗಿದ್ದಾರೆ. 781 ಮಂದಿ ಡಿಸ್ಚಾರ್ಜ್ ಆಗಿದ್ದು, ಸಕ್ರಿಯ ಪ್ರಕರಣಗಳ ಸಖ್ಯೆ 8364ಕ್ಕೆ ಇಳಿಕೆಯಾಗಿದೆ.
geethanjali
Publish Date: Fri, 23 Jul 2021 (20:25 IST)
Updated Date: Sat, 24 Jul 2021 (09:48 IST)