Select Your Language

Notifications

webdunia
webdunia
webdunia
webdunia

ಕೊಡಗು ಜಿಲ್ಲೆಯಲ್ಲಿ ಕೊರೋನಾ ಸೋಂಕು ಇಳಿಮುಖ

Coronavirus infection
ಕೊಡಗು ಜಿಲ್ಲೆಯಲ್ಲಿ ಶನಿವಾರ 28 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 6, ಸೋಮವಾರಪೇಟೆ ತಾಲೂಕಿನಲ್ಲಿ 10 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 12 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 47,469ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 100 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 46,327 ಮಂದಿ ಸೋಂಕು ಮುಕ್ತರಾದಂತಾಗಿದೆ.ಅಲ್ಲದೆ 448ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 694 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 97 ಹಾಗೂ ಪಾಸಿಟಿವಿಟಿ ದರ ಶೇ.1.56ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಥೈರಾಯ್ಡ್ ಸಮಸ್ಯೆ ಇದೆಯಾ? ಇಲ್ಲಿದೆ ಪರಿಹಾರ