Select Your Language

Notifications

webdunia
webdunia
webdunia
webdunia

ಮಂಗಳೂರು-ಕಾಸರಗೋಡು ರಸ್ತೆಯಲ್ಲಿ ಕರ್ನಾಟಕ ಹಾಕಿದ ಗಡಿ ದಿಗ್ಭಂಧನ ತೆಗೆಸುವಂತೆ ಕೇಂದ್ರಕ್ಕೆ ಕೇರಳ ಹೈಕೋರ್ಟ್ ಆದೇಶ

ಮಂಗಳೂರು-ಕಾಸರಗೋಡು ರಸ್ತೆಯಲ್ಲಿ ಕರ್ನಾಟಕ ಹಾಕಿದ ಗಡಿ ದಿಗ್ಭಂಧನ ತೆಗೆಸುವಂತೆ ಕೇಂದ್ರಕ್ಕೆ ಕೇರಳ ಹೈಕೋರ್ಟ್ ಆದೇಶ
ಕೇರಳ , ಗುರುವಾರ, 2 ಏಪ್ರಿಲ್ 2020 (10:00 IST)
ಕೇರಳ : ಮಂಗಳೂರು-ಕಾಸರಗೋಡು ಸಂಪರ್ಕವಿರುವ ರಸ್ತೆಯಲ್ಲಿ ಕರ್ನಾಟಕ ವಿಧಿಸಿರುವ ಗಡಿ ದಿಗ್ಭಂಧನವನ್ನು ತೆಗೆದುಹಾಕುವಂತೆ ಕೇರಳ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

ಈ ಬಗ್ಗೆ ಕೇರಳ ಹೈಕೋರ್ಟ್ ಅಸೋಸಿಯೇಷನ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಹೈಕೋರ್ಟ್, ಮಂಗಳೂರು-ಕಾಸರಗೋಡು ಸಂಪರ್ಕವಿರುವ ರಸ್ತೆಯು ರಾಷ್ಟ್ರೀಯ ಹೆದ್ದಾರಿಗಳ ಭಾಗವಾಗಿದೆ. ಆದಕಾರಣ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ನಿರ್ಮಿಸಿರುವ ಗಡಿ ಪ್ರದೇಶ ದಿಗ್ಭಂಧನವನ್ನು ತೆಗೆದುಹಾಕಿ ಎರಡು ರಾಜ್ಯಗಳ ನಡುವಿನ ಗಡಿಯುದ್ಧಕ್ಕೂ , ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ರೋಗಿಗಳನ್ನು ಕರೆದೊಯ್ಯುವ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವುದಾಗಿ ಹೇಳಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣದಿಂದ ಹೆಂಡತಿಯೊಂದಿಗೆ ಯಾವುದೇ ಲೈಂಗಿಕ ಸಂಬಂಧವನ್ನು ಹೊಂದಲು ಸಾಧ್ಯವಾಗಲಿಲ್ಲ